ದೇಶ

ಚುನಾವಣೋತ್ತರ ಸಮೀಕ್ಷೆಗಳನ್ನೇ ನಿಷೇಧಿಸಿ: ಸುಖ್ಬೀರ್ ಸಿಂಗ್ ಬಾದಲ್

Srinivas Rao BV

ಅಮೃತ್ ಸರ: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಗಳು ಅಂದಾಜಿಸಿರುವ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳನ್ನು ನಿಷೇಧಿಸಬೇಕೆಂದು ಶಿರೋಮಣಿ ಅಕಾಲಿ ದಳದ ನಾಯಕ ಸುಖ್ಬೀರ್ ಸಿಂಗ್ ಬಾದಲ್ ಹೇಳಿದ್ದಾರೆ. 

ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ನನಗೆ ನಂಬಿಕೆ ಇಲ್ಲ. ಅಭಿಪ್ರಾಯ ಸಂಗ್ರಹಗಳು ಹಾಗೂ ಚುನಾವಣೋತ್ತರ ಸಮೀಕ್ಷೆಗಳನ್ನು ನಿಷೇಧಿಸಬೇಕು ಎಂದು ಬಾದಲ್ ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಬಹುಮತ ದೊರೆಯಲಿದೆ ಎಂದು ಬಾದಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಅಮೃತಸರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಅವರು,  ಎಸ್ಎಡಿ ಜನರ ಧ್ವನಿಯನ್ನು ಪ್ರತಿನಿಧಿಸುತ್ತದೆ. ಜನಸೇವೆ ಮಾಡಲು ದೇವರು ಅವಕಾಶ ನೀಡಲಿದ್ದಾನೆ ಎಂಬ ವಿಶ್ವಾಸವಿದೆ" ಎಂದು ಬಾದಲ್ ಹೇಳಿದ್ದಾರೆ. 

ಇಲ್ಲಿರುವ ಯಾವುದೇ ಪಂಜಾಬಿಯನ್ನು ಕೇಳಿ, ಯಾರೂ ನಂಬುವುದಿಲ್ಲ. ಕಳೆದ ಬಾರಿಯೂ ಎಎಪಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಎಕ್ಸಿಟ್ ಪೋಲ್ ಭವಿಷ್ಯ ನುಡಿದಿತ್ತು. ಹಾಗಾಗಲಿಲ್ಲ. ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆದಾಗ, ಮಮತಾ ದೀದಿ ಅಲ್ಪ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದರು ಆದರೆ ಅವರು ಭಾರಿ ಅಂತರದಿಂದ ಗೆದ್ದಿದ್ದಾರೆ. ಅಭಿಪ್ರಾಯ ಸಂಗ್ರಹಗಳು ಮತ್ತು ಎಕ್ಸಿಟ್ ಪೋಲ್ ಗಳನ್ನು ನಿಷೇಧಿಸಬೇಕು ಎಂದು ಭಾವಿಸುವುದಾಗಿ ಬಾದಲ್ ನುಡಿದರು.

SCROLL FOR NEXT