ರಣದೀಪ್ ಸುರ್ಜೇವಾಲಾ 
ದೇಶ

ಪಂಚರಾಜ್ಯ ಫಲಿತಾಂಶ: ಚುನಾವಣಾ ಫಲಿತಾಂಶದಿಂದ ನಿರಾಸೆಯಾಗಿದೆ, ಆದರೆ ಧೈರ್ಯ ಕಳೆದುಕೊಂಡಿಲ್ಲ- ಕಾಂಗ್ರೆಸ್

ಐದು ರಾಜ್ಯಗಳ ಚುನಾವಣಾ ಫಲಿತಾಂಶದಿಂದ ನಿರಾಸೆಯಾಗಿದೆ ಎಂದು ಕಾಂಗ್ರೆಸ್ ಗುರುವಾರ ಹೇಳಿದೆ, ಆದರೆ ಚುನಾವಣೆಯಲ್ಲಿ ಸೋತಿದ್ದೇವೆ ಆದರೆ ಧೈರ್ಯ ಕುಂದಿಲ್ಲ ಮತ್ತು ಪಕ್ಷವು ಜನರ ಸಮಸ್ಯೆಗಳ ವಿರುದ್ದದ ಹೋರಾಟವನ್ನು ಮುಂದುವರಿಸುತ್ತದೆ ಎಂದು ಹೇಳಿದರು.

ನವದೆಹಲಿ: ಐದು ರಾಜ್ಯಗಳ ಚುನಾವಣಾ ಫಲಿತಾಂಶದಿಂದ ನಿರಾಸೆಯಾಗಿದೆ ಎಂದು ಕಾಂಗ್ರೆಸ್ ಗುರುವಾರ ಹೇಳಿದೆ, ಆದರೆ ಚುನಾವಣೆಯಲ್ಲಿ ಸೋತಿದ್ದೇವೆ ಆದರೆ ಧೈರ್ಯ ಕುಂದಿಲ್ಲ ಮತ್ತು ಪಕ್ಷವು ಜನರ ಸಮಸ್ಯೆಗಳ ವಿರುದ್ದದ ಹೋರಾಟವನ್ನು ಮುಂದುವರಿಸುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಚುನಾವಣೆಯಲ್ಲಿ ಗೆದ್ದ ಪಕ್ಷಗಳಿಗೆ ಅಭಿನಂದನೆ ಸಲ್ಲಿಸಿದರು.

'ಐದು ರಾಜ್ಯಗಳ ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ನಿರೀಕ್ಷೆಗೆ ವಿರುದ್ಧವಾಗಿವೆ. ನಾವು ಗೋವಾ, ಉತ್ತರಾಖಂಡ ಮತ್ತು ಪಂಜಾಬ್‌ನಲ್ಲಿ ಉತ್ತಮ ಫಲಿತಾಂಶಗಳನ್ನು ನಿರೀಕ್ಷಿಸಿದ್ದೇವೆ. ನಾವು ಜನರ ಆಶೀರ್ವಾದ ಪಡೆಯುವಲ್ಲಿ ವಿಫಲರಾಗಿದ್ದೇವೆ ಎಂದು ನಾವು ಒಪ್ಪಿಕೊಳ್ಳುತ್ತೇವೆ' ಎಂದು ಸುರ್ಜೇವಾಲಾ ಹೇಳಿದರು.

ಪಂಜಾಬ್ ಬಗ್ಗೆ ಮಾತನಾಡಿದ ಅವರು, 'ಚರಂಜಿತ್ ಸಿಂಗ್ ಚನ್ನಿ ರೂಪದಲ್ಲಿ ನಾವು ಸಭ್ಯ, ಉತ್ತಮ ನಾಯಕನನ್ನು ನೀಡಲು ಪ್ರಯತ್ನಿಸಿದ್ದೇವೆ, ಆದರೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಆಳ್ವಿಕೆಯಲ್ಲಿ ಬೆಳೆದ ನಾಲ್ಕೂವರೆ ವರ್ಷಗಳ ಆಡಳಿತ ವಿರೋಧಿ ವಿರುದ್ಧ ಹೋರಾಡಲು ನಮಗೆ ಸಾಧ್ಯವಾಗಲಿಲ್ಲ. ನಾವು ತೀರ್ಪನ್ನು ಸ್ವೀಕರಿಸುತ್ತೇವೆ ಮತ್ತು ಎಎಪಿ, ಭಗವಂತ್ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್ ಅವರನ್ನು ಅಭಿನಂದನೆಗಳು ಎಂದು ಹೇಳಿದರು.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪುನಶ್ಚೇತನಗೊಳ್ಳುವಲ್ಲಿ ಯಶಸ್ವಿಯಾಗಿದೆ. ಚುನಾವಣೆಯಲ್ಲಿ ಸ್ಥಾನಗಳು ಸಿಗದಿದ್ದರೂ ಕಾಂಗ್ರೆಸ್ ಪ್ರತಿ ಬೀದಿ ಮತ್ತು ಪ್ರದೇಶವನ್ನು ತಲುಪಿದೆ. ಉತ್ತರಾಖಂಡ ಮತ್ತು ಗೋವಾದಲ್ಲಿ ಕಾಂಗ್ರೆಸ್ ಚುನಾವಣೆಯಲ್ಲಿ ಉತ್ತಮವಾಗಿ ಸ್ಪರ್ಧಿಸಿದೆ, ಆದರೆ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ ಎಂದು ಸುರ್ಜೇವಾಲಾ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT