ಎಎಪಿ ಕಾರ್ಯಕರ್ತರ ಸಂಭ್ರಮಾಚರಣೆ 
ದೇಶ

ಕ್ಯಾಪ್ಟನ್ ಅಮರೀಂದರ್ ಸಿಂಗ್ ನಾಯಕ್ವತದಡಿಯ ಆಡಳಿತ ವಿರೋಧಿ ಅಲೆಯಿಂದ ಪಂಜಾಬ್ ನಲ್ಲಿ ಸೋಲು- ಕಾಂಗ್ರೆಸ್ 

ಪಂಜಾಬಿನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ನಾಯಕತ್ವದಡಿಯ ನಾಲ್ಕೂವರೆ ವರ್ಷಗಳ ಆಡಳಿತ ವಿರೋಧಿ ಅಲೆಯಿಂದ ಕಾಂಗ್ರೆಸ್ ಹೊರಬರಲು ಸಾಧ್ಯವಿಲ್ಲ, ಅದಕ್ಕಾಗಿ ಜನರು ಬದಲಾವಣೆಗಾಗಿ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಗುರುವಾರ ಹೇಳಿದ್ದಾರೆ. 

ನವದೆಹಲಿ: ಪಂಜಾಬಿನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ನಾಯಕತ್ವದಡಿಯ ನಾಲ್ಕೂವರೆ ವರ್ಷಗಳ ಆಡಳಿತ ವಿರೋಧಿ ಅಲೆಯಿಂದ ಕಾಂಗ್ರೆಸ್ ಹೊರಬರಲು ಸಾಧ್ಯವಿಲ್ಲ, ಅದಕ್ಕಾಗಿ ಜನರು ಬದಲಾವಣೆಗಾಗಿ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಗುರುವಾರ ಹೇಳಿದ್ದಾರೆ. 

ಮಣ್ಣಿನ ಮಗ ಚರಣ್ ಜಿತ್ ಸಿಂಗ್ ಚನ್ನಿ ಅವರ ಮೂಲಕ ಕಾಂಗ್ರೆಸ್ ಪಂಜಾಬಿನಲ್ಲಿ ಹೊಸ ನಾಯಕತ್ವ ಪರಿಚಯಿಸಿತ್ತು. ಆದರೆ, ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಇಡೀ ನಾಲ್ಕೂವರೆ ವರ್ಷಗಳ ಆಡಳಿತ ವಿರೋಧಿ ಅಲೆಯಿಂದ ಹೊರಬರಲು ಸಾಧ್ಯವಾಗಲಿಲ್ಲ. ಇದೇ ಕಾರಣದಿಂದಾಗಿ ಜನರು ಬದಲಾವಣೆಗಾಗಿ ಎಎಪಿ ಗೆಲ್ಲಿಸಿರುವುದಾಗಿ ಸುದ್ದಿಗೋಷ್ಠಿಯಲ್ಲಿ ಸುರ್ಜೇವಾಲ ಹೇಳಿದರು. 

117 ಸದಸ್ಯಬಲದ  ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 37 ಸ್ಥಾನಗಳಲ್ಲಿ ಗೆಲುವು ಸಾಧಿಸುವುದರೊಂದಿಗೆ  ಬಹುಮತ ಪಡೆದುಕೊಂಡಿದೆ. ಅಲ್ಲದೇ 54 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಕೇವಲ 4 ಸ್ಥಾನಗಳಲ್ಲಿ ಜಯಗಳಿಸಿದ್ದು, 5ರಲ್ಲಿ ಮುನ್ನಡೆಯಲ್ಲಿದೆ.

ಎಸ್ ಎಡಿ ಕೇವಲ 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ಎರಡು ಸ್ಥಾನಗಳಲ್ಲಿ ಮುನ್ನಡೆ ಕಾಯ್ಜುಕೊಂಡಿದೆ. ಬಿಜೆಪಿ, ಪಕ್ಷೇತರರು ತಲಾ 1 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.  ಪಂಜಾಬ್ ನಲ್ಲಿ ಭಗವಂತ್ ಮಾನ್ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT