ರಾಹುಲ್ ಗಾಂಧಿ 
ದೇಶ

ಚಾರ್ಮಿನಾರ್ ಮುಂದೆ ತ್ರಿವರ್ಣ ಧ್ವಜಾರೋಹಣ ಮಾಡಿದ ರಾಹುಲ್ ಗಾಂಧಿ, ವಿಡಿಯೋ!

32 ವರ್ಷಗಳ ಹಿಂದೆ ರಾಜೀವ್ ಗಾಂಧಿ ಚಾರ್ಮಿನಾರ್ ನಿಂದ 'ಸದ್ಭಾವನಾ ಯಾತ್ರೆ' ಆರಂಭಿಸಿದ್ದು ಇಂದು ಅದೇ ಜಾಗದಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಷ್ಟ್ರಧ್ವಜಾರೋಹಣ ಮಾಡಿದರು.

ಹೈದರಾಬಾದ್: 32 ವರ್ಷಗಳ ಹಿಂದೆ ರಾಜೀವ್ ಗಾಂಧಿ ಚಾರ್ಮಿನಾರ್ ನಿಂದ 'ಸದ್ಭಾವನಾ ಯಾತ್ರೆ' ಆರಂಭಿಸಿದ್ದು ಇಂದು ಅದೇ ಜಾಗದಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಷ್ಟ್ರಧ್ವಜಾರೋಹಣ ಮಾಡಿದರು. 

ಜನದಟ್ಟಣೆಯಿಂದ ಕೂಡಿದ ಚಾರ್ಮಿನಾರ್ ಪ್ರದೇಶದಲ್ಲಿ ಜನಸಾಗರದ ನಡುವೆ ಗಾಂಧಿ ತ್ರಿವರ್ಣ ಧ್ವಜವನ್ನು ಹಾರಿಸಿದರು.ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ರೇವಂತ್ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಚಾರ್ಮಿನಾರ್‌ಗೆ ಹೋಗುವ ರಸ್ತೆಯಲ್ಲಿ ರಾಹುಲ್ ಗಾಂಧಿ ತ್ರಿವರ್ಣ ಧ್ವಜ ಹಾಗೂ ಪಕ್ಷದ ಧ್ವಜಗಳೊಂದಿಗೆ ಜೋರಾಗಿ ಜಯಘೋಷಗಳು ಮತ್ತು 'ಭಾರತ್ ಜೋಡಿ' ಘೋಷಣೆಗಳೊಂದಿಗೆ ಚಾರ್ಮಿನಾರ್ ತಲುಪಿದರು. ವೇದಿಕೆಯಲ್ಲಿದ್ದ ತಮ್ಮ ತಂದೆ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ರಾಹುಲ್ ಗಾಂಧಿ ಪುಷ್ಪ ನಮನ ಸಲ್ಲಿಸಿದರು.

1990ರ ಅಕ್ಟೋಬರ್ 19ರಂದು ರಾಜೀವ್ ಗಾಂಧಿ ಅವರು ಸದ್ಭಾವನಾ ಯಾತ್ರೆ ಆರಂಭಿಸಿದ ಜಾಗವೇ ರಾಹುಲ್ ಗಾಂಧಿ ತ್ರಿವರ್ಣ ಧ್ವಜಾರೋಹಣ ಮಾಡಿದ ಸ್ಥಳವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಪ್ರತಿ ವರ್ಷ ಈ ದಿನದಂದು ಇಲ್ಲಿ ಕಾಂಗ್ರೆಸ್ ರಾಷ್ಟ್ರಧ್ವಜಾರೋಹಣ ಮಾಡುತ್ತಿದೆ. ಈ ಬಾರಿ ಅಕ್ಟೋಬರ್ 19ರಂದು ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಇಂದು ಮಾಡುತ್ತಿದ್ದೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!