ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದೆಹಲಿಯ ಪಾದರಕ್ಷೆ ತಯಾರಿಕೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, ಹಲವರಿಗೆ ಗಾಯ

ರಾಷ್ಟ್ರ ರಾಜಧಾನಿ ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿರುವ ಪಾದರಕ್ಷೆ ತಯಾರಿಕಾ ಕಾರ್ಖಾನೆಯಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟು ಹಲವರಿಗೆ ಗಾಯವಾಗಿರುವ ಘಟನೆ ನಡೆದಿದೆ.

ಅಗ್ನಿ ಅವಘಡ
Manjula VN
Updated On : 1 Nov 2022, 12:30 pm

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿರುವ ಪಾದರಕ್ಷೆ ತಯಾರಿಕಾ ಕಾರ್ಖಾನೆಯಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟು ಹಲವರಿಗೆ ಗಾಯವಾಗಿರುವ ಘಟನೆ ನಡೆದಿದೆ.

ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಈ ವರೆಗೂ ಮೂವರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ ಹಲವರು ಸಿಲುಕಿರುವ ಶಂಕೆಗಳು ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಗ್ನಿ ಅವಘಡಕ್ಕೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಇದೀಗ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement