ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಗುಜರಾತ್ ಸೇತುವೆ ದುರಂತ: ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ ಮೊರ್ಬಿ ತೂಗು ಸೇತುವೆ ಕುಸಿತದಲ್ಲಿ ಗಾಯಗೊಂಡು ಇಲ್ಲಿನ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Lingaraj Badiger
Updated On : 1 Nov 2022, 6:09 pm

ಮೊರ್ಬಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ ಮೊರ್ಬಿ ತೂಗು ಸೇತುವೆ ಕುಸಿತದಲ್ಲಿ ಗಾಯಗೊಂಡು ಇಲ್ಲಿನ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಈ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಜೊತೆಗಿದ್ದರು.

ದುರಂತದ ನಂತರದ ಪರಿಸ್ಥಿತಿಯನ್ನು ಪರಿಶೀಲಿಸಲು ಇದೀಗ ಮೊರ್ಬಿಯಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯುತ್ತಿದೆ.

ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ ಗುಜರಾತ್ ಮುಖ್ಯಮಂತ್ರಿಯೊಂದಿಗೆ ಸೇತುವೆ ಕುಸಿದ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಪಡೆದರು.

Advertisement

Advertisement

ಇದನ್ನು ಓದಿ: ಗುಜರಾತ್: ಮೊರ್ಬಿ ಸೇತುವೆ ನಿರ್ವಹಣಾ ಸಂಸ್ಥೆಯ ಕಚೇರಿ ಸೀಲ್

ಭಾನುವಾರ ಮೊರ್ಬಿ ಪಟ್ಟಣದಲ್ಲಿ ತೂಗು ಸೇತುವೆ ಕುಸಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 141 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement