ಜೆಮ್ ಶೆಡ್ ಜೆ ಇರಾನಿ 
ದೇಶ

ಭಾರತದ ಉಕ್ಕಿನ ಮನುಷ್ಯ, ಖ್ಯಾತ ಉಧ್ಯಮಿ ಜಮ್ಶೆಡ್ ಜೆ ಇರಾನಿ ನಿಧನ

ಭಾರತದ ಉಕ್ಕಿನ ಮನುಷ್ಯ (India’s Steel Man) ಎಂದೇ ಖ್ಯಾತರಾಗಿದ್ದ ಜಮ್ಶೆಡ್ ಜೆ ಇರಾನಿ ಅವರು ಸೋಮವಾರ ತಡರಾತ್ರಿ ಜೆಮ್‌ಶೆಡ್‌ಪುರದಲ್ಲಿ ನಿಧನರಾಗಿದ್ದಾರೆ ಎಂದು ಟಾಟಾ ಸ್ಟೀಲ್ (Tata Steel) ಕಂಪನಿ ತಿಳಿಸಿದೆ.

ನವದೆಹಲಿ: ಭಾರತದ ಉಕ್ಕಿನ ಮನುಷ್ಯ (India’s Steel Man) ಎಂದೇ ಖ್ಯಾತರಾಗಿದ್ದ ಜಮ್ಶೆಡ್ ಜೆ ಇರಾನಿ ಅವರು ಸೋಮವಾರ ತಡರಾತ್ರಿ ಜೆಮ್‌ಶೆಡ್‌ಪುರದಲ್ಲಿ ನಿಧನರಾಗಿದ್ದಾರೆ ಎಂದು ಟಾಟಾ ಸ್ಟೀಲ್ (Tata Steel) ಕಂಪನಿ ತಿಳಿಸಿದೆ.

ಇರಾನಿ ಅವರು 4 ದಶಕಗಳ ಕಾಲ ಟಾಟಾ ಸ್ಟೀಲ್‌ನಲ್ಲಿ ಕಾರ್ಯ ನಿರ್ವಹಿಸಿದ್ದರು. ಜೂನ್ 2011 ರಲ್ಲಿ ಟಾಟಾ ಸ್ಟೀಲ್ ಮಂಡಳಿಯಿಂದ ನಿವೃತ್ತರಾದ ಇವರು 43 ವರ್ಷಗಳ ಪರಂಪರೆಯನ್ನು ತೊರೆದಿದ್ದರು. ಇದು ಅವರಿಗೆ ಮತ್ತು ಕಂಪನಿಗೆ ವಿವಿಧ ಕ್ಷೇತ್ರಗಳಲ್ಲಿ ಅಂತಾರಾಷ್ಟ್ರೀಯ ಮೆಚ್ಚುಗೆಯನ್ನು ಗಳಿಸಲು ಕಾರಣವಾಗಿತ್ತು. 

ಇರಾನಿಯವರು 2011ರಲ್ಲಿ ಟಾಟಾ ಸ್ಟೀಲ್​ ಮಂಡಳಿಯ ಮ್ಯಾನೇಜಿಂಗ್​ ಡೈರೆಕ್ಟರ್​ ಹುದ್ದೆಯಿಂದ ನಿವೃತ್ತರಾಗಿದ್ದರು. ಟಾಟಾ ಸ್ಟೀಲ್​ ಕಂಪೆನಿಯ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದ ಜಮ್ಶೆಡ್​ ಇರಾನಿ 43 ವರ್ಷಗಳ ಕಾಲ ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸಿದ್ದರು. 1936ರಲ್ಲಿ ಜೂನ್​ 2ರಂದು ನಾಗ್ಪುರದಲ್ಲಿ ಜಿಜಿ ಇರಾನಿ ಮತ್ತು ಖೋರ್ಶೆಡ್ ಇರಾನಿ ದಂಪತಿಗೆ ಜನಿಸಿದ ಇವರು ತಮ್ಮ 86ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.

1936ರ ಜೂನ್ 2 ರಂದು ನಾಗ್ಪುರದಲ್ಲಿ ಜಿಜಿ ಇರಾನಿ ಮತ್ತು ಖೋರ್ಶೆಡ್ ಇರಾನಿ ದಂಪತಿಗೆ ಜನಿಸಿದ ಜಮ್ಶೆಡ್ ಜೆ ಇರಾನಿ ಅವರು 1956 ರಲ್ಲಿ ನಾಗ್ಪುರದ ವಿಜ್ಞಾನ ಕಾಲೇಜಿನಲ್ಲಿ ತಮ್ಮ ಬಿಎಸ್‌ಸಿ ಮತ್ತು 1958 ರಲ್ಲಿ ನಾಗ್ಪುರ ವಿಶ್ವವಿದ್ಯಾಲಯದಲ್ಲಿ ಭೂವಿಜ್ಞಾನದಲ್ಲಿ ಎಂಎಸ್‌ಸಿ ಪೂರ್ಣಗೊಳಿಸಿದರು. ಬಳಿಕ ಅವರು ಜೆಎನ್ ಟಾಟಾ ವಿದ್ವಾಂಸರಾಗಿ ಯುಕೆಯ ಶೆಫೀಲ್ಡ್ ವಿಶ್ವವಿದ್ಯಾಲಯಕ್ಕೆ ತೆರಳಿದರು. ಅಲ್ಲಿ ಅವರು 1960 ರಲ್ಲಿ ಮೆಟಲರ್ಜಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು ಹಾಗೂ 1963 ರಲ್ಲಿ ಲೋಹಶಾಸ್ತ್ರದಲ್ಲಿ ಪಿಹೆಚ್‌ಡಿ ಪಡೆದರು.

1963 ರಲ್ಲಿ ಶೆಫೀಲ್ಡ್ನಲ್ಲಿ ಬ್ರಿಟಿಷ್ ಐರನ್ ಮತ್ತು ಸ್ಟೀಲ್ ರಿಸರ್ಚ್ ಅಸೋಸಿಯೇಷನ್‌ನಲ್ಲಿ ತಮ್ಮ ವೃತ್ತಿಪರ ಜೀವನವನ್ನು ಪ್ರಾರಂಭಿಸಿದರು. ಆದರೂ ಅವರು ಯಾವಾಗಲೂ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಲು ಹಂಬಲಿಸಿದ್ದು, 1968 ರಲ್ಲಿ ಭಾರತಕ್ಕೆ ಮರಳಿ ಟಾಟಾ ಐರನ್ ಮತ್ತು ಸ್ಟೀಲ್ ಕಂಪನಿಗೆ (ಈಗಿನ ಟಾಟಾ ಸ್ಟೀಲ್) ಸಂಶೋಧನೆ ಮತ್ತು ಅಭಿವೃದ್ಧಿಯ ಉಸ್ತುವಾರಿ ನಿರ್ದೇಶಕರ ಸಹಾಯಕರಾಗಿ ಸೇರಿಕೊಂಡರು. 1978 ರಲ್ಲಿ ಜನರಲ್ ಸೂಪರಿಂಟೆಂಡೆಂಟ್, 1979 ರಲ್ಲಿ ಜನರಲ್ ಮ್ಯಾನೇಜರ್ ಮತ್ತು 1985 ರಲ್ಲಿ ಟಾಟಾ ಸ್ಟೀಲ್‌ನ ಅಧ್ಯಕ್ಷರಾದರು. ಅವರು 1988 ರಲ್ಲಿ ಟಾಟಾ ಸ್ಟೀಲ್‌ನ ಜಂಟಿ ವ್ಯವಸ್ಥಾಪಕ ನಿರ್ದೇಶಕರಾಗಿ, 1992 ರಲ್ಲಿ ವ್ಯವಸ್ಥಾಪಕ ನಿರ್ದೇಶಕರಾದರು. 2011 ರಲ್ಲಿ ನಿವೃತ್ತರಾದರು.

ಇರಾನಿ ಅವರು ಟಾಟಾ ಸ್ಟೀಲ್ ಮತ್ತು ಟಾಟಾ ಸನ್ಸ್ ಮಾತ್ರವಲ್ಲದೇ, ಟಾಟಾ ಮೋಟಾರ್ಸ್ ಮತ್ತು ಟಾಟಾ ಟೆಲಿಸರ್ವೀಸಸ್ ಸೇರಿದಂತೆ ಹಲವಾರು ಟಾಟಾ ಗ್ರೂಪ್ ಕಂಪನಿಗಳ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇರಾನಿ ಅವರು ತಮ್ಮ ಪತ್ನಿ ಡೈಸಿ ಇರಾನಿ ಮತ್ತು ಅವರ ಮೂವರು ಮಕ್ಕಳಾದ ಜುಬಿನ್, ನಿಲೋಫರ್ ಮತ್ತು ತನಾಜ್ ಅವರನ್ನು ಅಗಲಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT