ದೇಶ

ಮಾಲಿನ್ಯ ಕಡಿಮೆಯಾಗುವವರೆಗೆ ಶಾಲೆಗಳನ್ನು ಮುಚ್ಚುವಂತೆ ದೆಹಲಿ ಸರ್ಕಾರಕ್ಕೆ ಮಕ್ಕಳ ಹಕ್ಕುಗಳ ಸಂಸ್ಥೆ ಸೂಚನೆ

Ramyashree GN

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುವವರೆಗೆ ಶಾಲೆಗಳನ್ನು ಮುಚ್ಚುವಂತೆ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಇರುವ ರಾಷ್ಟ್ರೀಯ ಆಯೋಗ (ಎನ್‌ಸಿಪಿಸಿಆರ್‌) ದೆಹಲಿ ಸರ್ಕಾರಕ್ಕೆ ಸೂಚಿಸಿದೆ.

ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಅಂಕಿಅಂಶಗಳ ಪ್ರಕಾರ, ರಾಷ್ಟ್ರ ರಾಜಧಾನಿಯ ಗಾಳಿಯ ಗುಣಮಟ್ಟವು ಕಳೆದ ಕೆಲವು ದಿನಗಳಲ್ಲಿ 'ತೀವ್ರ' ಹದಗೆಟ್ಟಿದೆ.

ಸಿಪಿಸಿಬಿ ಪ್ರಕಾರ, 'ತೀವ್ರ' ವರ್ಗದಲ್ಲಿರುವ ವಾಯು ಮಾಲಿನ್ಯವು ಆರೋಗ್ಯವಂತ ಜನರ ಮೇಲೆ ಪರಿಣಾಮ ಬೀರುತ್ತದೆ. ಮಕ್ಕಳು ಮತ್ತು ರೋಗಿಗಳ ಮೇಲೆ ಗಂಭೀರವಾಗಿ ಪರಿಣಾಮ ಬೀರುತ್ತದೆ ಎಂದಿದೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಉನ್ನತ ಮಕ್ಕಳ ಹಕ್ಕುಗಳ ಸಂಸ್ಥೆಯು, ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ 'ತೀವ್ರ' ಹದಗೆಟ್ಟಿರುವ ಗಾಳಿಯ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ಎನ್‌ಸಿಪಿಸಿಆರ್ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ, ದೆಹಲಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುವವರೆಗೆ ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳನ್ನು ಮುಚ್ಚುವುದನ್ನು ಪರಿಗಣಿಸಬೇಕೆಂದು ಅವರು ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

SCROLL FOR NEXT