ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿಂದು 1,188 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 16,243ಕ್ಕೆ ಇಳಿಕೆ

ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,188 ಹೊಸ ಪ್ರಕರಣ ಪತ್ತೆಯಾಗಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,188 ಹೊಸ ಪ್ರಕರಣ ಪತ್ತೆಯಾಗಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,55,828ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ  5,30,452ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16,243ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,190 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ  4,41,09,133ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 1,57,091 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 90,12,50,299 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,66,16,127 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT