ಜೆ.ಪಿ.ನಡ್ಡಾ 
ದೇಶ

ನಾವು ನಿಮಗೆ ಕೋವಿಡ್ ಲಸಿಕೆ ನೀಡಿದ್ದೇವೆ, ನೀವು ನಮಗೆ ಮತ ನೀಡಿ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ

ಮುಂಬರುವ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮತ ಗಳಿಸಲು ಬಿಜೆಪಿ ಆರೋಗ್ಯದ ಮೂಲ ಹಕ್ಕನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದು, ನಾವು ನಿಮಗೆ ಕೋವಿಡ್ ಲಸಿಕೆ ನೀಡಿದ್ದೇವೆ. ನೀವು ನಮಗೆ ಮತ ನೀಡಿ...

ಬಿಲಾಸ್‌ಪುರ: ಮುಂಬರುವ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮತ ಗಳಿಸಲು ಬಿಜೆಪಿ ಆರೋಗ್ಯದ ಮೂಲ ಹಕ್ಕನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದು, ನಾವು ನಿಮಗೆ ಕೋವಿಡ್ ಲಸಿಕೆ ನೀಡಿದ್ದೇವೆ. ನೀವು ನಮಗೆ ಮತ ನೀಡಿ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಬುಧವಾರ ಹೇಳಿದ್ದಾರೆ.

ಬಿಲಾಸ್‌ಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾತನಾಡಿದ ಜೆಪಿ ನಡ್ಡಾ, “ಪ್ರಧಾನಿ ಮೋದಿಜಿ ಒಂಬತ್ತು ತಿಂಗಳೊಳಗೆ ದೇಶದಲ್ಲಿಯೇ ಎರಡು ಲಸಿಕೆಗಳನ್ನು ತಯಾರಿಸಿದರು ಮತ್ತು ನಿಮ್ಮೆಲ್ಲರಿಗೂ ಡಬಲ್ ಡೋಸ್ ಮತ್ತು ಬೂಸ್ಟರ್ ಡೋಸ್ ಹಾಕಿ ರಕ್ಷಿಸಿದ್ದಾರೆ. ನಿಮ್ಮನ್ನು ರಕ್ಷಿಸಿದ ಪಕ್ಷವನ್ನು ರಕ್ಷಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಹೇಳಿದರು.

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಪಕ್ಷದ 'ವಿಷನ್ ಡಾಕ್ಯುಮೆಂಟ್'(ಪ್ರಣಾಳಿಕೆ) ಅನ್ನು ಶುಕ್ರವಾರ ಜೆಪಿ ನಡ್ಡಾ ಅವರು ಬಿಡುಗಡೆ ಮಾಡಲಿದ್ದಾರೆ. 

ಜೆಪಿ ನಡ್ಡಾ ಅವರು ನವೆಂಬರ್ 4 ರಂದು ಶಿಮ್ಲಾದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 5 ಮತ್ತು 9 ರಂದು ಕನಿಷ್ಠ ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

68 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 12 ರಂದು ಚುನಾವಣೆ ನಿಗದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video