ಸಂಗ್ರಹ ಚಿತ್ರ 
ದೇಶ

'ಬಿಂದಿ' ಇಟ್ಟಿಲ್ಲ ಎಂದು ಮಹಿಳಾ ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ ಬಲಪಂಥೀಯ ಕಾರ್ಯಕರ್ತೆ ಭಿಡೆ

ಹಣೆಗೆ 'ಬಿಂದಿ' ಇಟ್ಟಿಲ್ಲ ಎಂಬ ಕಾರಣಕ್ಕೆ ಮಹಿಳಾ ವರದಿಗಾರ್ತಿಯೊಂದಿಗೆ ಮಾತನಾಡಲು ಬಲಪಂಥೀಯ ನಾಯಕ ಸಂಭಾಜಿ ಭಿಡೆ ನಿರಾಕರಿಸಿದ್ದು ಇದು ವಿವಾದಕ್ಕೆ ಕಾರಣವಾಗಿದೆ.

ಮುಂಬೈ: ಹಣೆಗೆ 'ಬಿಂದಿ' ಇಟ್ಟಿಲ್ಲ ಎಂಬ ಕಾರಣಕ್ಕೆ ಮಹಿಳಾ ವರದಿಗಾರ್ತಿಯೊಂದಿಗೆ ಮಾತನಾಡಲು ಬಲಪಂಥೀಯ ನಾಯಕ ಸಂಭಾಜಿ ಭಿಡೆ ನಿರಾಕರಿಸಿದ್ದು ಇದು ವಿವಾದಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾದ ನಂತರ ಈ ಘಟನೆ ನಡೆದಿದ್ದು ಈ ಹಿನ್ನೆಲೆಯಲ್ಲಿ ಭಿಡೆ ಅವರಿಗೆ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.

ಸಿಎಂ ಶಿಂಧೆ ಭೇಟಿಯ ವಿಚಾರವಾಗಿ ಹೇಳಿಕೆ ನೀಡುವಂತೆ ಮಾಧ್ಯಮ ಮಹಿಳಾ ವರದಿಗಾರ್ತಿ ಕೇಳಿದ್ದು ಇದಕ್ಕೆ ಭಿಡೆ ಅವರು, ಹೇಳಿಕೆ ಪಡೆಯುವ ಮುನ್ನ 'ಬಿಂದಿ'ಯನ್ನು ಯಾಕೆ ಇಟ್ಟುಕೊಂಡಿಲ್ಲ ಎಂದು ಕೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. 

ಮಹಿಳೆ ಭಾರತ ಮಾತೆಯನ್ನು ಹೋಲುತ್ತಾರೆ. ಬಿಂದಿ ಇಡದೇ 'ವಿಧವೆ' ಯಂತೆ ಕಾಣಿಸಿಕೊಳ್ಳಬಾರದು ಎಂದು ಅವರು ಪತ್ರಕರ್ತರಿಗೆ ಹೇಳಿದರು.

ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಅವರು ಬಲಪಂಥೀಯ ನಾಯಕನ ಹೇಳಿಕೆಗೆ ವಿವರಣೆ ನೀಡುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

2018ರಲ್ಲಿ ಭಿಡೆ ಅವರು ತಮ್ಮ ತೋಟದ ಮಾವಿನ ಹಣ್ಣುಗಳನ್ನು ತಿಂದರೆ ದಂಪತಿಗಳಿಗೆ ಸಂತಾನವಾಗಲಿದೆ ಎಂದು ಹೇಳಿದ್ದು ಈ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT