ಮತದಾನ ಮಾಡಲು ನಿಂತಿರುವ ಮತದಾರರು 
ದೇಶ

ಆರು ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ: ಮತದಾನ ಆರಂಭ

ಆರು ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಇಂದು ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ. ಪ್ರಮುಖವಾಗಿ ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ನವದೆಹಲಿ: ಆರು ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಇಂದು ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ. ಪ್ರಮುಖವಾಗಿ ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಬಿಹಾರದಲ್ಲಿ ಎರಡು ಮತ್ತು ಮಹಾರಾಷ್ಟ್ರ, ಹರಿಯಾಣ, ತೆಲಂಗಾಣ, ಉತ್ತರ ಪ್ರದೇಶ ಮತ್ತು ಒಡಿಶಾ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದೆ.

ಬಿಹಾರದ ಮೊಕಾಮಾ ಮತ್ತು ಗೋಪಾಲ್‌ಗಂಜ್, ಮಹಾರಾಷ್ಟ್ರದ ಅಂಧೇರಿ (ಪೂರ್ವ), ಹರಿಯಾಣದ ಆದಂಪುರ, ತೆಲಂಗಾಣದ ಮುನುಗೋಡು, ಉತ್ತರ ಪ್ರದೇಶದ ಗೋಲಾ ಗೋರಖ್‌ನಾಥ್ ಮತ್ತು ಒಡಿಶಾದ ಧಾಮ್‌ನಗರ ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ.

ಮತದಾನಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಪಚುನಾವಣೆಯ ಫಲಿತಾಂಶವು ನವೆಂಬರ್ 6ರಂದು ಪ್ರಕಟಗೊಳ್ಳಲಿದೆ. ಉಪಚುನಾವಣೆ ನಡೆಯುತ್ತಿರುವ ಏಳು ಸ್ಥಾನಗಳಲ್ಲಿ ಕಳೆದ ಬಾರಿ ಬಿಜೆಪಿ ಮೂರು, ಕಾಂಗ್ರೆಸ್ ಎರಡು, ಶಿವಸೇನಾ ಮತ್ತು ಆರ್‌ಜೆಡಿ ತಲಾ ಒಂದು ಸ್ಥಾನಗಳಲ್ಲಿ ಗೆಲುವು ದಾಖಲಿಸಿತ್ತು.

ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಪತನಗೊಳಿಸಿ ಸರ್ಕಾರ ರಚಿಸಿದ್ದರೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಹಾರದಲ್ಲಿ ಕಾಂಗ್ರೆಸ್ ಮತ್ತು ಆರ್​ಜೆಡಿಯೊಂದಿಗೆ ಮೈತ್ರಿ ಮಾಡಿಕೊಂಡು ಮತ್ತೊಮ್ಮೆ ಸರ್ಕಾರ ರಚಿಸಿದ್ದಾರೆ. ನವೆಂಬರ್ 6ರಂದು (ಭಾನುವಾರ) ಮತಗಳ ಎಣಿಕೆ ನಡೆಯಲಿದೆ.

ಗುಜರಾತ್ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಇಂದು ದಿನಾಂಕವನ್ನು ಘೋಷಿಸಲಿದೆ.  ಮಧ್ಯಾಹ್ನ 12 ಗಂಟೆಗೆ ಚುನಾವಣೆ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT