ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 1,321 ಹೊಸ ಪ್ರಕರಣ, 9 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,321 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,57,149 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,321 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,57,149 ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 16,098 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಗುರುವಾರ ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ 5 ಸೇರಿದಂತೆ ಒಟ್ಟು 9 ಮಂದಿ ಸಾವಿಗೀಡಾಗಿದ್ದು, ಈವರೆಗೆ 5,30,461 ಜನರು ಸೋಂಕಿನಿಂದ ಪ್ರಾಣಕಳೆದುಕೊಂಡಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.04ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.78ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸದ್ಯ ಈವರೆಗೆ 4,41,10,590 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ. ಸಚಿವಾಲಯದ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೂ 219.67 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಗಾಳದಲ್ಲಿ CAA, UCC ತ್ವರಿತ ಅನುಷ್ಠಾನ; ಮಾತುವಾ, ನಮಸುದ್ರರಿಗೆ ಪೌರತ್ವ ನೀಡುತ್ತೇವೆ: ಪ್ರಧಾನಿ ಮೋದಿ

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

ಹಾಡಹಗಲೇ, ನಡುರಸ್ತೆಯಲ್ಲಿ ಲಾಯರ್ ಗೆ ಗುಂಡಿಕ್ಕಿ ಹತ್ಯೆ, ಬೈಕ್ ಸ್ಟಾರ್ಟ್ ಆಗದೇ ಹಂತಕರ ಪರದಾಟ! Video

Viral Video: 'ರೀಲ್ಸ್‌ಗಾಗಿ ಮಗುವಿನ ಪ್ರಾಣವನ್ನೇ ಪಣಕ್ಕಿಟ್ಟ ತಂದೆ'; ಬಾಲ್ಕನಿಯಿಂದ ಜಿಗಿದ ಬಾಲಕ, ಅಪ್ಪನ ಹುಚ್ಚಾಟಕ್ಕೆ ತೀವ್ರ ಆಕ್ರೋಶ!

SCROLL FOR NEXT