ಪ್ರಾತಿನಿಧಿಕ ಚಿತ್ರ 
ದೇಶ

ಪಾಕಿಸ್ತಾನದ ಉಗ್ರ ಸೇರಿ ಮೂವರು ಲಷ್ಕರ್-ಎ-ತೊಯ್ಬಾದ ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ

ಭದ್ರತಾ ಪಡೆ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಅವಂತಿಪೋರಾದಲ್ಲಿ ಮೂವರು ಲಷ್ಕರ್-ಎ-ತೊಯ್ಬಾದ ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶ್ರೀನಗರ: ಭದ್ರತಾ ಪಡೆ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಅವಂತಿಪೋರಾದಲ್ಲಿ ಮೂವರು ಲಷ್ಕರ್-ಎ-ತೊಯ್ಬಾದ ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಕ್ಷಣಾ ಸಚಿವಾಲಯದ ಪ್ರಕಾರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಖಂಡಿಪೋರಾ, ಅವಂತಿಪೋರಾದ ಸಾಮಾನ್ಯ ಪ್ರದೇಶದಲ್ಲಿ ಮೂವರು ಭಯೋತ್ಪಾದಕರು ವಾಹನದಲ್ಲಿ ಓಡಾಡುವ ಖಚಿತ ಮಾಹಿತಿಯನ್ನು ಪಡೆದಿದ್ದರು. ಅದರಂತೆ ಸೇನೆ ಮತ್ತು ಪೊಲೀಸರು ಮಂಗಳವಾರ ಸಂಜೆ ಜಂಟಿ ಸಂಚಾರಿ ವಾಹನ ಚೆಕ್ ಪೋಸ್ಟ್ ಸ್ಥಾಪಿಸಿದ್ದಾರೆ.

ಈ ವೇಳೆ ನಡೆದ ಜಂಟಿ ಕಾರ್ಯಾಚರಣೆಯಲ್ಲಿ, ಸಂಜೆ 7:15ರ ಸುಮಾರಿಗೆ ಚೆಕ್ ಪೋಸ್ಟ್ ಬಳಿ ಅನುಮಾನಾಸ್ಪದ ವಾಹನ ಬರುತ್ತಿರುವುದನ್ನು ಗಮನಿಸಲಾಗಿದೆ. ವಾಹನವನ್ನು ತಡೆದ ಬಳಿಕ, ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.

ಈ ವೇಳೆ ಪ್ರತಿದಾಳಿ ನಡೆಸಿದ ತಂಡವು, ಓರ್ವ ಉಗ್ರನನ್ನು ಎನ್‌ಕೌಂಟರ್ ಮಾಡಿದೆ. ಆದರೆ, ಇತರ ಇಬ್ಬರು ಪಕ್ಕದ ಹೊಲಗಳಿಗೆ ಓಡಿಹೋಗಿದ್ದಾರೆ.

ಓಡಿಹೋದ ಉಗ್ರರನ್ನು ಹಿಡಿಯಲು ಭದ್ರತಾ ಪಡೆಗಳು ಶೋಧಕಾರ್ಯಾಚರಣೆಯನ್ನು ಮುಂದುವರಿಸಿದವು ಮತ್ತು ಆ ಪ್ರದೇಶವನ್ನು ಸುತ್ತುವರಿಯಲಾಯಿತು. ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಇಬ್ಬರೂ ಉಗ್ರರನ್ನು ಎನ್‌ಕೌಂಟರ್ ಮಾಡಿದ್ದಾರೆ.

ಎನ್‌ಕೌಂಟರ್ ಸ್ಥಳದಿಂದ ಎರಡು ಎಕೆ ಸರಣಿಯ ರೈಫಲ್‌ಗಳು, ಒಂದು ಪಿಸ್ತೂಲ್ ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪೊಲೀಸರ ಪ್ರಕಾರ, ಎಲ್ಲಾ ಮೂವರು ಭಯೋತ್ಪಾದಕರು ಎಲ್‌ಇಟಿಗೆ ಸೇರಿದವರಾಗಿದ್ದು, ಓರ್ವನನ್ನು ಪಾಕಿಸ್ತಾನದ ನಿವಾಸಿ ಅಲಿ ಅಲಿಯಾಸ್ ಮುಬಾಸಿರ್ ಮತ್ತು ಪುಲ್ವಾಮಾ ನಿವಾಸಿಗಳಾದ ಮುಖ್ತಾರ್ ಅಹ್ಮದ್ ಭಟ್ ಮತ್ತು ಸಕ್ಲೇನ್ ಮುಷ್ತಾಕ್ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT