ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,216 ಹೊಸ ಪ್ರಕರಣ ಪತ್ತೆ

ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,216 ಹೊಸ ಪ್ರಕರಣ ಪತ್ತೆಯಾಗಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,216 ಹೊಸ ಪ್ರಕರಣ ಪತ್ತೆಯಾಗಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,58,365ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,479ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,705ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,591 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ  4,41,12,181ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 1,64,629 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 90,14,14,928 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,69,78,353 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

Monalisa Love jihad case: 'ವನವಾಸ ಅಂತ್ಯ.. ಪಿತೂರಿ ನಡೆಸಿದ ಜಿಹಾದಿ ಜೈಲಿಗೆ'; ನಿರ್ದೇಶಕ Sanoj Mishra ಪೋಸ್ಟ್ ವೈರಲ್

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

SCROLL FOR NEXT