ಕುಸಿದು ಬೀಳುತ್ತಿರುವ ಸೇತುವೆ. 
ದೇಶ

ಸೇತುವೆ ಕುಸಿತ ಪ್ರಕರಣ: ಮೋರ್ಬಿ ಪುರಸಭೆ ಮುಖ್ಯಾಧಿಕಾರಿ ಅಮಾನತು

ಸೇತುವೆ ಕುಸಿದು 135 ಜನರ ಸಾವಿಗೆ ಕಾರಣವಾದ ಘಟನೆಗೆ ಸಂಬಂಧಿಸಿದಂತೆ ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಾಲಾ ಅವರನ್ನು ಗುಜರಾತ್ ಸರ್ಕಾರ ಅಮಾನತುಗೊಳಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಮೋರ್ಬಿ: ಸೇತುವೆ ಕುಸಿದು 135 ಜನರ ಸಾವಿಗೆ ಕಾರಣವಾದ ಘಟನೆಗೆ ಸಂಬಂಧಿಸಿದಂತೆ ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಾಲಾ ಅವರನ್ನು ಗುಜರಾತ್ ಸರ್ಕಾರ ಅಮಾನತುಗೊಳಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಮೋರ್ಬಿ ಸೇತುವೆ ಕುಸಿದುಬಿದ್ದು 135ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಮೃತರಲ್ಲಿ ಮಹಿಳೆಯರು ಹಾಗೂ ಮಕ್ಕಳೂ ಸೇರಿದ್ದರು.

ಘಟನೆ ಸಂಬಂಧ "ರಾಜ್ಯ ನಗರಾಭಿವೃದ್ಧಿ ಇಲಾಖೆಯು ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಲಾ ಅವರನ್ನು ಅಮಾನತುಗೊಳಿಸಿದೆ" ಎಂದು ಮೊರ್ಬಿ ಜಿಲ್ಲಾಧಿಕಾರಿ ಜಿ ಟಿ ಪಾಂಡ್ಯ ತಿಳಿಸಿದ್ದಾರೆ.

ಮುಂದಿನ ಆದೇಶದವರೆಗೆ ಮೋರ್ಬಿಯ ನಿವಾಸಿ ಹೆಚ್ಚುವರಿ ಜಿಲ್ಲಾಧಿಕಾರಿಗೆ ಮುಖ್ಯ ಅಧಿಕಾರಿಯ ಹೆಚ್ಚುವರಿ ಪ್ರಭಾರವನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮೋರ್ಬಿ ಪುರಸಭೆಯು ಸೇತುವೆ ದುರಸ್ತಿ ಮತ್ತು ನಿರ್ವಹಣೆಯ ಗುತ್ತಿಗೆಯನ್ನು 15 ವರ್ಷಗಳ ಕಾಲ ಒರೆವಾ ಗುಂಪಿಗೆ ನೀಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದೂವರೆಗೆ ಒಂಬತ್ತು ಜನರನ್ನು ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT