ದೇಶ

ಗುಜರಾತ್ ವಿಧಾನಸಭಾ ಚುನಾವಣೆ: ಎಎಪಿ ಮತಗಳಿಕೆ ಶೇ.24 ಮೀರಬಾರದು; ಬಿಜೆಪಿಗೆ ಅಮಿತ್ ಶಾ ಎಚ್ಚರಿಕೆ

Nagaraja AB

ಗಾಂಧಿನಗರ: ಗುಜರಾತ್ ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಈ ಬಾರಿ ಎಎಪಿ ಸ್ಪರ್ಧೆಯೊಂದಿಗೆ ತೀವ್ರ ಕುತೂಹಲ ಮೂಡಿಸಿದೆ. ಸುಮಾರು 27 ವರ್ಷಗಳಿಂದಲೂ ಇಲ್ಲಿ ಬಿಜೆಪಿ ಪ್ರಾಬಲ್ಯ ಹೊಂದಿದ್ದು, ಅಧಿಕಾರ ಅನುಭವಿಸುತ್ತಾ ಬಂದಿದ್ದೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಈ ಚುನಾವಣೆ ಪ್ರತಿಷ್ಠೆಯಾಗಿದ್ದು, ಈ ಬಾರಿಯೂ ಚುನಾವಣೆಗೆದ್ದು ಅಧಿಕಾರ ಉಳಿಸಿಕೊಳ್ಳುವ ಸಂಕಲ್ಪ ಮಾಡಿದ್ದಾರೆ.

ಆದರೆ, ಎಎಪಿ ಸ್ಪರ್ಧೆಯೊಂದಿಗೆ ಅದು ಅಂದುಕೊಂಡಷ್ಟು ಸುಲಭವಾಗಿಲ್ಲ. ಆಮ್ ಆದ್ಮಿ ಪಕ್ಷ ಗುಜರಾತ್ ನಲ್ಲಿ ಪರಿಣಾಮ ಬೀರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ.  ಬಿಜೆಪಿ 122 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಅಮಿತ್ ಶಾ ಹೇಳುತ್ತಿದ್ದಾರೆ. ಆದರೆ, ಸಾಂಪ್ರಾದಾಯಿಕ ಕಾಂಗ್ರೆಸ್ ಮತಗಳನ್ನು ಎಎಪಿ ಸೆಳೆದುಕೊಂಡರೆ ಮಾತ್ರ ಇದು ಸಾಧ್ಯ. ಇಲ್ಲವಾದರೆ ಅದು ಕಷ್ಟಸಾಧ್ಯ ಎನ್ನಲಾಗುತ್ತಿದೆ.

ಬಿಜೆಪಿ ಕೂಡಾ ಎಎಪಿಯನ್ನು ಹಗುರವಾಗಿ ಪರಿಗಣಿಸಿಲ್ಲ. ಮೋದಿ ಮತ್ತು ಅಮಿತ್ ಶಾ ಕೋಟ್ಯಂತರ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವುದರೊಂದಿಗೆ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಎಎಪಿ ಮತಗಳಿಕೆಯಲ್ಲಿ ಶೇ. 24 ಮೀರಬಾರದು ಎಂದು ಅಮಿತ್ ಶಾ ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ. ಎಎಪಿ ಕಾಂಗ್ರೆಸ್ ಗಿಂತ ಹೆಚ್ಚಿನ ಸವಾಲುವೊಡ್ಡುವುದನ್ನು ಅಮಿತ್ ಶಾ ತಿಳಿದಿದ್ದಾರೆ 

ಮತದಾರರನ್ನು ಸೂಕ್ಷ್ಮವಾಗಿ ಗಮನಿಸಲು ಮತ್ತು ಸುಮಾರು 24 ಮಿಲಿಯನ್ ಮತಗಳನ್ನು ಗಳಿಸಲು ಡೇಟಾಬೇಸ್‌ನಲ್ಲಿ ಉತ್ತಮವಾಗಿ ದಾಖಲಿಸಲ್ಪಟ್ಟ 8.2 ಮಿಲಿಯನ್ ಬಿಜೆಪಿ ಕಾರ್ಯಕರ್ತರ ಸೈನ್ಯವನ್ನು ಬಳಸಲು ರಾಜ್ಯ ಬಿಜೆಪಿ ಮುಖ್ಯಸ್ಥ ಸಿ ಆರ್ ಪಾಟೀಲ್ ಯೋಜಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 14 ಮಿಲಿಯನ್ ಮತಗಳನ್ನು ಗಳಿಸಿತ್ತು. ಪ್ರತಿಯೊಬ್ಬರನ್ನು ಭೇಟಿ ಮಾಡಿ ಬಿಜೆಪಿಗೆ ಮತ ಹಾಕುವುದು ಏಕೆ ಉತ್ತಮ ಎಂಬುದನ್ನು ಮನವರಿಕೆ ಮಾಡಿಕೊಡಲಿದ್ದಾರೆ. ಇದು ಅಂದುಕೊಂಡಂತೆ ನಡೆದರೆ 130-150 ಸ್ಥಾನಗಳನ್ನು ಗೆಲ್ಲುವ ಭರವಸೆಯನ್ನು ಪಕ್ಷ ಹೊಂದಿದೆ.

SCROLL FOR NEXT