ಶರದ್ ಪವಾರ್ 
ದೇಶ

ಪ್ರಧಾನಿ ವಿಶಾಲ ಮನಸ್ಸಿನವರಾಗಿರಬೇಕು: ಮೋದಿಗೆ ಪವಾರ್ ಗುದ್ದು

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಶನಿವಾರ ಪ್ರಧಾನಿ ಮೋದಿಯನ್ನು ಗುರಿಯಾಗಿಸಿಕೊಂಡು ಟೀಕಾ ಪ್ರಹಾರ ನಡೆಸಿದ್ದು, ಪ್ರಧಾನಿಯಾದವರು ವಿಶಾಲ ಮನಸ್ಸಿನವರಾಗಿರಬೇಕು ಮತ್ತು ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಯ ದೃಷ್ಟಿಕೋನವನ್ನು ಹೊಂದಿರಬೇಕು.. ಆದರೆ ದುರಾದೃಷ್ಟವಶಾತ್ ಅದು ಹಾಗೆ ಕಾಣುತ್ತಿಲ್ಲ  ಎಂದು ಟೀಕಿಸಿದ್ದಾರೆ.

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಶನಿವಾರ ಪ್ರಧಾನಿ ಮೋದಿಯನ್ನು ಗುರಿಯಾಗಿಸಿಕೊಂಡು ಟೀಕಾ ಪ್ರಹಾರ ನಡೆಸಿದ್ದು, ಪ್ರಧಾನಿಯಾದವರು ವಿಶಾಲ ಮನಸ್ಸಿನವರಾಗಿರಬೇಕು ಮತ್ತು ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಯ ದೃಷ್ಟಿಕೋನವನ್ನು ಹೊಂದಿರಬೇಕು.. ಆದರೆ ದುರಾದೃಷ್ಟವಶಾತ್ ಅದು ಹಾಗೆ ಕಾಣುತ್ತಿಲ್ಲ  ಎಂದು ಟೀಕಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 81 ವರ್ಷದ ಪವಾರ್ ಅವರು ವೈದ್ಯರೊಂದಿಗೆ ಮುಂಬೈನಿಂದ ಶಿರಡಿಗೆ ಆಗಮಿಸಿ ಪಕ್ಷದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. "ಪ್ರಧಾನಿಯೊಬ್ಬರು ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಗೆ ದೂರದೃಷ್ಟಿಯನ್ನು ಹೊಂದಿರಬೇಕು ಮತ್ತು ವಿಶಾಲ ಮನಸ್ಸಿನವರಾಗಿರಬೇಕು. ಆದರೆ ದುರದೃಷ್ಟವಶಾತ್ ಅದು ಹಾಗೆ ತೋರುತ್ತಿಲ್ಲ. ದುರ್ಬಲಗೊಳ್ಳುತ್ತಿರುವ ಆರ್ಥಿಕತೆಯನ್ನು (ಪುನರುಜ್ಜೀವನಗೊಳಿಸಲು) ಮತ್ತು ಹಣದುಬ್ಬರವನ್ನು ತಗ್ಗಿಸಲು ಪ್ರಧಾನಮಂತ್ರಿ ಹೆಚ್ಚು ಗಮನಹರಿಸಬೇಕು ಎಂದರು.

'ಪಕ್ಷದ ಕಾರ್ಯಕರ್ತರು ರಾಜ್ಯದಲ್ಲಿ 'ರಾಜಕೀಯ ಬದಲಾವಣೆ' ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಮಾವೇಶದಲ್ಲಿ ಸುಸ್ತಾಗಿ ಕಾಣುತ್ತಿದ್ದ ಪವಾರ್ ಕೆಲ ನಿಮಿಷಗಳ ಕಾಲ ಮಾತನಾಡಿದರು. 10 ರಿಂದ 15 ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಿರುವುದರಿಂದ ಹೆಚ್ಚು ಮಾತನಾಡಲು ಸಾಧ್ಯವಾಗುತ್ತಿಲ್ಲ ಎಂದು ಪವಾರ್ ಹೇಳಿದರು. ನಂತರ ಅವರು ಪಕ್ಷದ ನಾಯಕ ದಿಲೀಪ್ ವಾಲ್ಸೆ ಪಾಟೀಲ್ ಅವರಿಗೆ ಭಾಷಣವನ್ನು ಓದಲು ಹೇಳಿದರು.

ಪವಾರ್ ಅವರ ಭಾಷಣವನ್ನು ಪಕ್ಷದ ಹಿರಿಯ ನಾಯಕ ದಿಲೀಪ್ ವಾಲ್ಸೆ ಪಾಟೀಲ್ ಅವರು ಓದಿದರು. 'ಅವರು ದೀರ್ಘವಾಗಿ ಮಾತನಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ ಅವರು, ಪವಾರ್ ತಮ್ಮ ಭಾಷಣದಲ್ಲಿ, ಕೆಲವು ರಾಜ್ಯಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳಲ್ಲಿ ಭಾರತೀಯ ಜನತಾ ಪಕ್ಷವನ್ನು ತಿರಸ್ಕರಿಸಲಾಗಿದೆ, ಆದರೆ ಇತರ ರಾಜ್ಯಗಳಲ್ಲಿ ಕೇಸರಿ ಪಕ್ಷವು ಕೇಂದ್ರ ತನಿಖಾ ಸಂಸ್ಥೆಗಳನ್ನು "ದುರುಪಯೋಗ" ಮಾಡುವ ಮೂಲಕ ಸರ್ಕಾರಗಳನ್ನು ರಚಿಸಿದೆ ಎಂದು ಹೇಳಿದರು. ಪ್ರಗತಿಪರ ಸಿದ್ಧಾಂತಕ್ಕೆ ಬದ್ಧರಾಗಿರಲು ಮತ್ತು ಯಾವುದೇ "ಪ್ರಚೋದನೆಗಳಿಗೆ" ಬಲಿಯಾಗದಂತೆ ಎನ್‌ಸಿಪಿ ಕಾರ್ಯಕರ್ತರಿಗೆ ಪವಾರ್ ಮನವಿ ಮಾಡಿದರು.

ಗುಜರಾತ್, ಅಸ್ಸಾಂ, ಉತ್ತರ ಪ್ರದೇಶ, ಹರಿಯಾಣ ಮತ್ತು ಕೆಲವು ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿ ದೇಶದ ಬಹುಪಾಲು ಜನರು ಭಾರತೀಯ ಜನತಾ ಪಕ್ಷವನ್ನು ತಿರಸ್ಕರಿಸಿದ್ದಾರೆ. ಕರ್ನಾಟಕ, ಗೋವಾ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಆಯಾ ಸರ್ಕಾರಗಳನ್ನು (ಬಿಜೆಪಿ) ಪತನಗೊಳಿಸಲಾಗಿದೆ ಎಂದು ಅವರು ಆರೋಪಿಸಿದರು.

ಕಳೆದ ಕೆಲವು ದಿನಗಳಿಂದ ಸೋಂಕು ಮತ್ತು ಜ್ವರದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪವಾರ್, ವೈದ್ಯರ ತಂಡದೊಂದಿಗೆ ಮಹಾಲಕ್ಷ್ಮಿ ರೇಸ್ ಕೋರ್ಸ್‌ಗೆ ಆಗಮಿಸಿ ಹೆಲಿಕಾಪ್ಟರ್‌ನಲ್ಲಿ ಅಹಮದ್‌ನಗರ ಜಿಲ್ಲೆಯ ಶಿರಡಿಗೆ ತೆರಳಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು