ಜಯನಾರಾಯಣ ವ್ಯಾಸ್ 
ದೇಶ

ಚುನಾವಣೆಗೂ ಮುನ್ನ ಬಿಜೆಪಿ ತೊರೆದ ಗುಜರಾತ್‌ ಮಾಜಿ ಸಚಿವ ಜಯನಾರಾಯಣ ವ್ಯಾಸ್

ಗುಜರಾತ್‌ ಮಾಜಿ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಜಯನಾರಾಯಣ ವ್ಯಾಸ್ ಅವರು ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ವೈಯಕ್ತಿಕ ಕಾರಣಗಳನ್ನು ನೀಡಿ ಶನಿವಾರ...

ಅಹಮದಾಬಾದ್: ಗುಜರಾತ್‌ ಮಾಜಿ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಜಯನಾರಾಯಣ ವ್ಯಾಸ್ ಅವರು ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ವೈಯಕ್ತಿಕ ಕಾರಣಗಳನ್ನು ನೀಡಿ ಶನಿವಾರ ಆಡಳಿತ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಗುಜರಾತ್ ಕಾಂಗ್ರೆಸ್ ನಾಯಕರೊಬ್ಬರು ವ್ಯಾಸ್ ಅವರು ದೇಶದ ಅತ್ಯಂತ ಹಳೆಯ ಪಕ್ಷವನ್ನು ಸೇರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಆದರೆ, ವ್ಯಾಸ್ ಇದುವರೆಗೂ ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.

75 ವರ್ಷದ ವ್ಯಾಸ್ ಅವರು ಇತ್ತೀಚೆಗೆ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದರು ಎಂದು ಕಾಂಗ್ರೆಸ್ ನಾಯಕ ತಿಳಿಸಿದ್ದಾರೆ.

ವ್ಯಾಸ್ ಅವರು ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್.ಪಾಟೀಲ್ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ,  ಕಳೆದ ಮೂರು ದಶಕಗಳಿಂದ ಬಿಜೆಪಿಯ ಸಿದ್ಧಾಂತದಂತೆ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದೇನೆ. ಈಗ ವೈಯಕ್ತಿಕ ಕಾರಣಗಳಿಗಾಗಿ ಇಂದು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ವ್ಯಾಸ್ ಅವರು ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಸಚಿವರಾಗಿದ್ದರು. ಆದಾಗ್ಯೂ, ಅವರು 2012 ಮತ್ತು 2017 ರ ವಿಧಾನಸಭಾ ಚುನಾವಣೆಯಲ್ಲಿ ಸಿಧ್‌ಪುರದಿಂದ ಸೋತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!