ಸಂಗ್ರಹ ಚಿತ್ರ 
ದೇಶ

ಮದ್ಯಪಾನ ವೇಳೆ ದುರಂತ; ಗಂಟಲಲ್ಲಿ ಆಮ್ಲೆಟ್ ಸಿಲುಕಿ ವ್ಯಕ್ತಿ ಸಾವು!

ಕುಡಿದ ಮತ್ತಿನಲ್ಲಿ ತಾನು ತಿಂದ ಆಮ್ಲೆಟ್ ಗಂಟಲಲ್ಲಿ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಹೈದರಾಬಾದ್: ಕುಡಿದ ಮತ್ತಿನಲ್ಲಿ ತಾನು ತಿಂದ ಆಮ್ಲೆಟ್ ಗಂಟಲಲ್ಲಿ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ಜನಗಾಂವ್ ಜಿಲ್ಲೆಯ ಬಚನ್ನಪೇಟೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕುಡಿಯಲು ಬಾರ್​​ಗೆ ಹೋದ ವ್ಯಕ್ತಿಯೊಬ್ಬ ಕಂಠಪೂರ್ತಿ ಕುಡಿದು ಬಳಿಕ ಆಮ್ಲೆಟ್ ತಿಂದಿದ್ದಾನೆ. ಈ ವೇಳೆ ಆಮ್ಲೆಟ್​​ ಗಂಟಲಿನಲ್ಲಿ ಸಿಕ್ಕಿಕೊಂಡ ಪರಿಣಾಮ ಆತ ಮೃತಪಟ್ಟಿದ್ದಾನೆ. 

ಸ್ಥಳೀಯರ ಪ್ರಕಾರ ಬಚ್ಚನ್ನಪೇಟೆಯ ನಿವಾಸಿ ಇದುಲಕಂತಿ ಭೂಪಾಲ್ ರೆಡ್ಡಿ (38) ಮೃತ ವ್ಯಕ್ತಿಯಾಗಿದ್ದು, ಈತ ಸ್ಥಳೀಯ ಮದ್ಯದ ಅಂಗಡಿಯೊಂದರಲ್ಲಿ ಕೊಠಡಿಯಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದ. ಈ ವೇಳೆ, ತಿನ್ನುತ್ತಿದ್ದ ಆಮ್ಲೆಟ್ ಗಂಟಲಿನಲ್ಲಿ ಸಿಲುಕಿಕೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel