ಪೋಸ್ಟರ್ 
ದೇಶ

ದೆಹಲಿ ಸಿಎಂ ಕೇಜ್ರಿವಾಲ್'ರನ್ನು ಹಿಟ್ಲರ್'ಗೆ ಹೋಲಿಸಿದ ಬಿಜೆಪಿ!

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿರುವ ಬಿಜೆಪಿ, ಈ  ಪೋಸ್ಟರ್ ಅನ್ನು ರಾಷ್ಟ್ರ ರಾಜಧಾನಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯ ಹೊರಗೆ ಹಾಕಿಕೊಂಡಿದೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿರುವ ಬಿಜೆಪಿ, ಈ  ಪೋಸ್ಟರ್ ಅನ್ನು ರಾಷ್ಟ್ರ ರಾಜಧಾನಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯ ಹೊರಗೆ ಹಾಕಿಕೊಂಡಿದೆ.

ಬಿಜೆಪಿ ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರು, ಪಕ್ಷದ ಪ್ರಧಾನ ಕಚೇರಿಯ ಹೊರಗೆ ಕೇಜ್ರಿವಾಲ್ ಅವರನ್ನು ಹಿಟ್ಲರ್'ಗೆ ಹೋಲಿಸಿರುವ ಪೋಸ್ಟರ್ ಗಳನ್ನು ಹಾಕಿದ್ದಾರೆ.

ನಗರವನ್ನು ಗ್ಯಾಸ್ ಚೇಂಬರ್ ಆಗಿ ಬದಲಾಯಿಸಿದ ಮೊದಲನೇ ನಾಯಕ ಹಿಟ್ಲರ್ ಆಗಿದ್ದರೆ, ಎರಡನೇ ನಾಯಕ ಕೇಜ್ರಿವಾಲ್ ಆಗಿದ್ದಾರೆಂದು ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರು ಹೇಳಿದ್ದಾರೆ.

ದೆಹಲಿಯಲ್ಲಿ ವಾಯುಮಾಲಿನ್ಯ ಹದಗೆಟ್ಟಿದ್ದು, ಜನರು ಸಾಯುತ್ತಿದ್ದರೂ, ಮುಖ್ಯಮಂತ್ರಿಗಳು ಮಾತ್ರ ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಿಗೆ ರಾಜಕೀಯ ಪ್ರವಾಸ ಕೈಗೊಂಡಿದ್ದಾರೆಂದು ತಿಳಿಸಿದ್ದಾರೆ.

ನಾನು ಕೇಜ್ರಿವಾಲ್ ಅವರನ್ನು ಹಿಟ್ಲರ್'ಗೆ ಹೋಲಿಸುತ್ತಿದ್ದೇನೆ. ಏಕೆಂದರೆ, ನಾಯಕನೊಬ್ಬ ತನ್ನ ರಾಜ್ಯವನ್ನು ಗ್ಯಾಸ್ ಚೇಂಬರ್ ಆಗಿ ಪರಿವರ್ತಿಸಿದ ವಿಶ್ವದ ಎರಡನೇ ಉದಾಹರಣೆ ಇದಾಗಿದೆ. ಸುಪ್ರೀಂ ಕೋರ್ಟ್ ಕೂಡ ದೆಹಲಿ ಗ್ಯಾಸ್ ಚೇಂಬರ್ ಆಗಿ ಪರಿವರ್ತನೆಗೊಂಡಿದೆ ಎಂದು ಹೇಳಿದೆ. ಇದರ ಕ್ರೆಡಿಟ್ ಕೇಜ್ರಿವಾಲ್ ಅವರಿಗೆ ಹೋಗಬೇಕು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Unnao Rape Case: ಕುಲದೀಪ್ ಸಿಂಗ್ ಸೆಂಗಾರ್'ಗೆ ತೀವ್ರ ಹಿನ್ನಡೆ, ಜೀವಾವಧಿ ಶಿಕ್ಷೆ ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಡೆಹ್ರಾಡೂನ್‌ನಲ್ಲಿ ತ್ರಿಪುರಾ ವಿದ್ಯಾರ್ಥಿಯ ಹತ್ಯೆ: 'ಭಯಾನಕ ದ್ವೇಷ' ದ ಅಪರಾಧ, BJP ವಿರುದ್ಧ ರಾಹುಲ್ ಗಾಂಧಿ ಕಿಡಿ!

ಬೆಂಗಳೂರಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಾಲ್ವರ ಬಂಧನ; 1.2 ಕೋಟಿ ರೂ. ಮೌಲ್ಯದ ಮೆಫೆಡ್ರೋನ್ ಜಪ್ತಿ

Andhra Pradesh: ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ, ಓರ್ವನ ಸಾವು, ಹಲವು ಪ್ರಯಾಣಿಕರಿಗೆ ಗಾಯ, Video

Horrific Video: Mahindra Bolero ವಾಹನದ ಮೇಲೆ ಬಿದ್ದ ಟ್ರಕ್, ಕಾರು ಅಪ್ಪಚ್ಚಿ, ಚಾಲಕ ಸಾವು!

SCROLL FOR NEXT