ಸಾಂದರ್ಭಿಕ ಚಿತ್ರ 
ದೇಶ

ಒಡಿಶಾ: ಕುಟುಂಬದವರನ್ನು, ನೆರೆಯವರನ್ನು ಹತ್ಯೆ ಮಾಡಿದ 16 ವರ್ಷದ ಬಾಲಕನ ಬಂಧನ

ತ್ರಿಪುರಾದ ದಲೈ ಜಿಲ್ಲೆಯ ದೂರದ ಹಳ್ಳಿಯೊಂದರಲ್ಲಿ 16 ವರ್ಷದ ಬಾಲಕನೊಬ್ಬ ತನ್ನ ಕುಟುಂಬದ ಮೂವರು ಸದಸ್ಯರನ್ನು ಮತ್ತು ನೆರೆಹೊರೆಯವರನ್ನು ಕೊಲೆ ಮಾಡಿ ಶವಗಳನ್ನು ಬಾವಿಗೆ ಎಸೆದಿದ್ದಾನೆ ಎಂದು ಹಿರಿಯ ಪೊಲೀಸ್...

ಅಗರ್ತಲಾ: ತ್ರಿಪುರಾದ ದಲೈ ಜಿಲ್ಲೆಯ ದೂರದ ಹಳ್ಳಿಯೊಂದರಲ್ಲಿ 16 ವರ್ಷದ ಬಾಲಕನೊಬ್ಬ ತನ್ನ ಕುಟುಂಬದ ಮೂವರು ಸದಸ್ಯರನ್ನು ಮತ್ತು ನೆರೆಹೊರೆಯವರನ್ನು ಕೊಲೆ ಮಾಡಿ ಶವಗಳನ್ನು ಬಾವಿಗೆ ಎಸೆದಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಆರೋಪಿ ಬಾಲಕನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

"ಕಮಲ್‌ಪುರ ಉಪವಿಭಾಗದ ನಿವಾಸಿಯಾದ ಬಾಲಕ ನಿತ್ಯ ಮಾದಕ ದ್ರವ್ಯ ಸೇವಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಶನಿವಾರ ಬೆಳಗ್ಗೆ ತಂದೆ ಇಲ್ಲದಿದ್ದಾಗ ತಾಯಿ, ಅಜ್ಜ, 10 ವರ್ಷದ ಸಹೋದರಿ ಹಾಗೂ ನೆರೆಹೊರೆಯವರನ್ನು ಕೊಂದಿದ್ದಾನೆ. ಅಪರಾಧದ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ" ಎಂದು ಅಧಿಕಾರಿ ಹೇಳಿದ್ದಾರೆ.

ಅಧಿಕಾರಿಯ ಪ್ರಕಾರ, ಬಾಲಕನ ತಂದೆ ಮನೆಗೆ ಬಂದಿದ್ದು, ಎಲ್ಲೆಂದರಲ್ಲಿ ರಕ್ತ ಚಿಮ್ಮಿದ್ದು, ಶವಗಳನ್ನು ಮನೆಯ ಪಕ್ಕದ ಬಾವಿಯಲ್ಲಿ ಬಿಸಾಡಿದ್ದಾರೆ. ತಂದೆ ಕೂಗಾಡಿದ ನಂತರ ಗ್ರಾಮಸ್ಥರು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆರೋಪಿಯ ಮನೆಯಲ್ಲಿ ಬೆಳಗ್ಗೆ 9.30 ರ ಸುಮಾರಿಗೆ ಜೋರಾಗಿ ಸಂಗೀತ ಹಾಕಿರುವುದು ಕೇಳಿಸಿತು ಎಂದು ಗ್ರಾಮಸ್ಥರು ಹೇಳಿದ್ದಾರೆ ಮತ್ತು ಗಂಟೆಗಳ ನಂತರ ಅವರ ತಂದೆ ಬಾವಿಯಲ್ಲಿ ನಾಲ್ಕು ಶವಗಳನ್ನು ನೋಡಿದ್ದಾರೆ. ಶನಿವಾರ ಸಂಜೆ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT