ಮುಂಬರುವ ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ 
ದೇಶ

8 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶ; ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಗೆ ನವೆಂಬರ್ 12 ರಂದು ಚುನಾವಣೆ ನಡೆಯಲಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಶಿಮ್ಲಾ: 68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಗೆ ನವೆಂಬರ್ 12 ರಂದು ಚುನಾವಣೆ ನಡೆಯಲಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಣಾಳಿಕೆ ಕರಡು ರಚನೆಗೆ ಸಾರ್ವಜನಿಕರಿಂದ ಸಲಹೆಗಳನ್ನು ಪಡೆಯಲು ಪಕ್ಷವು ಸಮಿತಿಯನ್ನು ರಚಿಸಿತ್ತು.

11 ಬದ್ಧತೆಗಳ ಕುರಿತು ಸಂಕಲ್ಪ ಪತ್ರವನ್ನು ಬಿಡುಗಡೆಗೊಳಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, 'ಈ ಬದ್ಧತೆಗಳು ಸಮಾಜದಲ್ಲಿ ಏಕರೂಪತೆಯನ್ನು ತರುತ್ತವೆ. ಯುವಕರು ಮತ್ತು ರೈತರನ್ನು ಸಬಲಗೊಳಿಸುತ್ತವೆ, ತೋಟಗಾರಿಕೆಯನ್ನು ಬಲಪಡಿಸುತ್ತವೆ, ಸರ್ಕಾರಿ ನೌಕರರಿಗೆ ನ್ಯಾಯವನ್ನು ನೀಡುತ್ತವೆ ಮತ್ತು ಧಾರ್ಮಿಕ ಪ್ರವಾಸೋದ್ಯಮವನ್ನು ಮುನ್ನಡೆಸುತ್ತವೆ ಎಂದು ಹೇಳಿದರು.

ಬಿಜೆಪಿ ಸರ್ಕಾರವು ರಾಜ್ಯಕ್ಕೆ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ತರಲಿದೆ. ಈ ಉದ್ದೇಶಕ್ಕಾಗಿ ತಜ್ಞರ ಸಮಿತಿಯನ್ನು ರಚಿಸಲಾಗುವುದು ಮತ್ತು ಅವರ ವರದಿಯ ಆಧಾರದ ಮೇಲೆ ರಾಜ್ಯದಲ್ಲಿ ಯುಸಿಸಿ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ಬಿಜೆಪಿ ಸರ್ಕಾರವು ಹಂತ ಹಂತವಾಗಿ 8 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಒದಗಿಸಲಿದೆ. ಇದು ಸರ್ಕಾರಿ ಉದ್ಯೋಗಗಳು ಮತ್ತು ಆರ್ಥಿಕ ವಲಯದಲ್ಲಿ ನಡೆಯುತ್ತಿರುವ ಕೆಲಸಗಳನ್ನು ಒಳಗೊಂಡಿರುತ್ತದೆ ಎಂದರು.

ಬಿಜೆಪಿ ಸರ್ಕಾರ 'ಶಕ್ತಿ' ಕಾರ್ಯಕ್ರಮವನ್ನು ಪ್ರಾರಂಭಿಸಲಿದ್ದು, ಇದರ ಅಡಿಯಲ್ಲಿ ಧಾರ್ಮಿಕ ಸ್ಥಳಗಳು ಮತ್ತು ದೇವಾಲಯಗಳ ಸುತ್ತ ಮೂಲಸೌಕರ್ಯ ಮತ್ತು ಸಾರಿಗೆಯನ್ನು ಅಭಿವೃದ್ಧಿಪಡಿಸಲು 10 ವರ್ಷಗಳ ಅವಧಿಯಲ್ಲಿ ₹ 12,000 ಕೋಟಿ ವ್ಯಯಿಸಲಾಗುವುದು. ಅವುಗಳನ್ನು 'ಹಿಮ್‌ತೀರ್ಥ' ಸರ್ಕ್ಯೂಟ್‌ಗೆ ಸಂಪರ್ಕಿಸಲಾಗುತ್ತದೆ ಎಂದು ಹೇಳಿದರು.

ನಾವು ಇಲ್ಲಿ 5 ಹೊಸ ವೈದ್ಯಕೀಯ ಕಾಲೇಜುಗಳನ್ನು ತೆರೆಯುತ್ತೇವೆ. ಆರೋಗ್ಯ ಮೂಲಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ಮತ್ತು ಪ್ರಾಥಮಿಕ ಆರೋಗ್ಯವನ್ನು ಮತ್ತಷ್ಟು ಬಲಪಡಿಸಲು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸಂಚಾರಿ ಚಿಕಿತ್ಸಾಲಯಗಳ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗುವುದು. ಇದರಿಂದ ದೂರದ ಪ್ರದೇಶಗಳ ಜನರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.

ಬಿಜೆಪಿ ಸಮೀಕ್ಷೆ ನಡೆಸಲಿದೆ, ವಕ್ಫ್ ಆಸ್ತಿಗಳನ್ನು ನ್ಯಾಯಾಂಗ ಆಯೋಗದ ಅಡಿಯಲ್ಲಿ ಕಾನೂನು ಪ್ರಕಾರ ತನಿಖೆ ಮಾಡಲಾಗುತ್ತದೆ ಮತ್ತು ಅವುಗಳ ಅಕ್ರಮ ಬಳಕೆಯನ್ನು ತಡೆಯಲಾಗುವುದು ಎಂದಿರುವ ಬಿಜೆಪಿ, ಇದರೊಂದಿಗೆ ರಾಜ್ಯದಲ್ಲಿ ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿ ನೀಡುವುದಾಗಿ ಭರವಸೆ ನೀಡಿದರು. 6-12 ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ ಮತ್ತು ಉನ್ನತ ಶಿಕ್ಷಣ ಪಡೆಯುವವರಿಗೆ ಸ್ಕೂಟಿ ನೀಡಲಾಗುತ್ತದೆ ಎಂದು ಜೆಪಿ ನಡ್ಡಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

ಇರಾನ್ ಪ್ರತಿಭಟನೆಯಲ್ಲಿ 2000 ಜನ ಸಾವು; ಇದಕ್ಕೆ ಉಗ್ರರು ಕಾರಣ ಎಂದ ಅಧಿಕಾರಿಗಳು

IPL 2026: RCB ತವರು ಮೈದಾನ ಕೊನೆಗೂ ಬಹುತೇಕ ಫಿಕ್ಸ್, ಈ ಎರಡು ಮೈದಾನಗಳಲ್ಲೇ ಪಂದ್ಯ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

SCROLL FOR NEXT