ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ 1,132 ಹೊಸ ಪ್ರಕರಣ, 14 ಮಂದಿ ಸಾವು

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 1,132 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,60,579 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ 1,132 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,60,579 ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 14,839ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ ಕೇರಳದಲ್ಲಿ 5 ಸೇರಿದಂತೆ 14 ಜನರು ಮೃತಪಟ್ಟಿದ್ದು, ಈವರೆಗೆ 5,30,500 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.03ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.78 ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 4,41,15,240 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ.

ಸಚಿವಾಲಯದ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ 219.72 ಕ್ಕೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ