ಬಿಜೆಪಿ ಲೋಗೋ 
ದೇಶ

ಗುಜರಾತ್ ಚುನಾವಣೆ: ಬಿಜೆಪಿ ಸಂಸದರು, ಶಾಸಕರ ಸಂಬಂಧಿಕರಿಗೆ ಟಿಕೆಟ್ ಇಲ್ಲ! 

ಗುಜರಾತ್ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡಿದ್ದು, ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಬಿಜೆಪಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಅಹ್ಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡಿದ್ದು, ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಬಿಜೆಪಿ ಮಹತ್ವದ ನಿರ್ಧಾರ ಕೈಗೊಂಡಿದೆ.
 
ಹಾಲಿ ಶಾಸಕರು, ಸಂಸದರಾಗಿರುವವರ ಪೈಕಿ ಅವರ ಸಂಬಂಧಿಕರಿಗೆ ಟಿಕೆಟ್ ನೀಡದೇ ಇರಲು ಬಿಜೆಪಿ ನಿರ್ಧರಿಸಿದೆ. 

ಈ ಮಾಹಿತಿಯನ್ನು ಬಿಜೆಪಿ ರಾಜ್ಯಾಧಿಯಕ್ಷ ಸಿಆರ್ ಪಾಟಿಲ್ ಸ್ಪಷ್ಟಪಡಿಸಿದ್ದಾರೆ. ಭರೂಚ್ ಸಂಸದ ಮನ್ಸುಖ್ ವಸವಾ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಮಗಳಿಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದರು. ಇವರ ರೀತಿಯಲ್ಲೇ ಪಕ್ಷದ ಇನ್ನೂ ಹಲವು ಸಂಸದರು, ಶಾಸಕರು, ಸಂಸದರು ಬೇಡಿಕೆಗಳನ್ನು ಹೊಂದಿದ್ದರು. 

ಆಡಳಿತಾರೂಢ ಬಿಜೆಪಿ 182 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿ ಕ್ಷೇತ್ರಕ್ಕೆ 3 ಸಂಭಾವ್ಯರ ಪಟ್ಟಿಯನ್ನು ಸಿದ್ಧಗೊಳಿಸುತ್ತಿದೆ. ಗುರುವಾರದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣಾ ಸಮಿತಿ ಸಭೆ ನಡೆಸಲಿದ್ದಾರೆ. ಈ ನಡುವೆ ಪ್ರಣಾಳಿಕೆಗೆ ಬಿಜೆಪಿ ಸಾರ್ವಜನಿಕರಿಂದ ಸಲಹೆ ಹೇಳಿದ್ದು, ಅಗ್ರೆಸರ್ ಗುಜರಾತ್ ಎಂಬ ವೆಬ್ ಸೈಟ್ ನಲ್ಲಿ ಸಲಹೆ ನೀಡಬಹುದಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!