ರಾಹುಲ್ ಗಾಂಧಿ 
ದೇಶ

ಬಿಜೆಪಿಯ 'ಡಬಲ್ ಇಂಜಿನ್' ಮೋಸದಿಂದ ಗುಜರಾತ್ ಜನರನ್ನು ರಕ್ಷಿಸುತ್ತೇವೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ತಮ್ಮ ಪಕ್ಷವು ಗುಜರಾತ್ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸುತ್ತದೆ ಮತ್ತು ಬಿಜೆಪಿಯ "ಡಬಲ್ ಇಂಜಿನ್" ನ "ವಂಚನೆ"ಯಿಂದ ಅವರನ್ನು ರಕ್ಷಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.

ನವದೆಹಲಿ: ತಮ್ಮ ಪಕ್ಷವು ಗುಜರಾತ್ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸುತ್ತದೆ ಮತ್ತು ಬಿಜೆಪಿಯ "ಡಬಲ್ ಇಂಜಿನ್" ನ "ವಂಚನೆ"ಯಿಂದ ಅವರನ್ನು ರಕ್ಷಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.

'500 ರೂ.ಗಳಲ್ಲಿ ಎಲ್‌ಪಿಜಿ ಸಿಲಿಂಡರ್, ಯುವಕರಿಗೆ 10 ಲಕ್ಷ ಉದ್ಯೋಗ, 3 ಲಕ್ಷದವರೆಗೆ ರೈತರ ಸಾಲ ಮನ್ನಾ ಸೇರಿದಂತೆ ನಾವು ಗುಜರಾತ್‌ನ ಜನರಿಗೆ ಮಾಡಿದ 'ಕಾಂಗ್ರೆಸ್‌ನಾ8 ವಚನ'ವನ್ನು ಈಡೇರಿಸುತ್ತೇವೆ' ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

'ಪಕ್ಷವು ಬಿಜೆಪಿಯ 'ಡಬಲ್ ಇಂಜಿನ್' ನ ಮೋಸದಿಂದ ನಿಮ್ಮನ್ನು ರಕ್ಷಿಸುತ್ತದೆ. ರಾಜ್ಯದಲ್ಲಿ 'ಬದಲಾವಣೆಯ ಹಬ್ಬ' ಆಚರಿಸುತ್ತದೆ' ಎಂದು ಕಾಂಗ್ರೆಸ್ ಮಾಜಿ ಮುಖ್ಯಸ್ಥರು ಹೇಳಿದರು.

ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

ಕಾಂಗ್ರೆಸ್, ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳು ಮತದಾರರನ್ನು ಓಲೈಸಲು ಮುಂದಾಗಿದ್ದು, ತ್ರಿಕೋನ ಸ್ಫರ್ಧೆ ಏರ್ಪಡುವ ಸಾಧ್ಯತೆಯಿದೆ.

2017ರ ಚುನಾವಣೆಯಲ್ಲಿ ಒಟ್ಟು 182 ಸ್ಥಾನಗಳಲ್ಲಿ ಬಿಜೆಪಿ 99 ಮತ್ತು ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್