ದೇಶ

ಬಿಹಾರದ ಕತಿಹಾರ್‌ನಲ್ಲಿ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

Ramyashree GN

ಪಾಟ್ನಾ: ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ಮುಖಂಡರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೀಡಾದವರನ್ನು ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರಾಗಿದ್ದ ತೆಲ್ಟಾ ಗ್ರಾಮದ ಸಂಜೀವ್ ಮಿಶ್ರಾ ಎಂದು ಗುರುತಿಸಲಾಗಿದೆ.

ಅವರು ತೆಲ್ಟಾದಲ್ಲಿರುವ ತಮ್ಮ ಮನೆಯ ಹೊರಗೆ ಕುಳಿತಿದ್ದಾಗ ದಾಳಿಕೋರರು ಆಗಮಿಸಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಎರಡು ಗುಂಡೇಟಿನಿಂದ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಳೆ ದ್ವೇಷ ಹಾಗೂ ಆಸ್ತಿ ವಿವಾದವೇ ಹಲ್ಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

SCROLL FOR NEXT