ಮನೀಶ್ ಸಿಸೋಡಿಯಾ 
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಅಪ್ರೂವರ್ ಆಗಲು ಸಿಸೋಡಿಯಾ ಸಹಾಯಕ ದಿನೇಶ್ ನಿರ್ಧಾರ

ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ಸಹಾಯಕ ಮತ್ತು ದೆಹಲಿಯ ಅಬಕಾರಿ ನೀತಿ ಹಗರಣದ ಆರೋಪಿ ದಿನೇಶ್ ಅರೋರಾ ಅವರು ಪ್ರಕರಣದಲ್ಲಿ ಅಪ್ರೂವರ್(ಮಾಫಿ ಸಾಕ್ಷಿದಾರ) ಆಗಲು ನಿರ್ಧರಿಸಿದ್ದು, ದೆಹಲಿ...

ನವದೆಹಲಿ: ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ಸಹಾಯಕ ಮತ್ತು ದೆಹಲಿಯ ಅಬಕಾರಿ ನೀತಿ ಹಗರಣದ ಆರೋಪಿ ದಿನೇಶ್ ಅರೋರಾ ಅವರು ಪ್ರಕರಣದಲ್ಲಿ ಅಪ್ರೂವರ್(ಮಾಫಿ ಸಾಕ್ಷಿದಾರ) ಆಗಲು ನಿರ್ಧರಿಸಿದ್ದು, ದೆಹಲಿ ಡಿಸಿಎಂಗೆ ಹೊಸ ಸಂಕಷ್ಟ ಎದುರಾಗಿದೆ.

ಸದ್ಯ ನಿರೀಕ್ಷಣಾ ಜಾಮೀನು ಪಡೆದಿರುವ ಅರೋರಾ ಅವರನ್ನು ಪ್ರಕರಣದಲ್ಲಿ ಮಾಫಿ ಸಾಕ್ಷಿದಾರರನ್ನಾಗಿ ಮಾಡಲು ಸಿಬಿಐ ನ್ಯಾಯಾಲಯದಿಂದ ಅನುಮತಿ ಕೋರಿದೆ. ಅಲ್ಲದೆ ಅವರ ಜಾಮೀನು ಅರ್ಜಿಗೆ ತನಿಖಾ ಸಂಸ್ಥೆ ವಿರೋಧಿಸಿಲ್ಲ.

"ಅರೋರಾ ಅವರು ಇತರ ಸಹ-ಆರೋಪಿಗಳೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಕೆಲವು ಮದ್ಯದ ಪರವಾನಗಿಗಳಿಂದ ಸಂಗ್ರಹಿಸಲಾದ ಅನಗತ್ಯ ಹಣದ ಲಾಭವನ್ನು ನಿರ್ವಹಿಸುವಲ್ಲಿ ಮತ್ತು ವಾಪಸ್ ನೀಡುವಲ್ಲ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಆದರೆ ಆ ಹಣದ ಫಲಾನುಭವಿಯಾಗಿರಲಿಲ್ಲ ಮತ್ತು ತನಿಖೆಗೆ ಅರೋರಾ ಸಹಕರಿಸಿದರು" ಎಂದು ಸಿಬಿಐ ಹೇಳಿದೆ.

ದೆಹಲಿಯ ಅಬಕಾರಿ ನೀತಿ 2021-22ರ ಅನುಷ್ಠಾನದಲ್ಲಿನ ಅಕ್ರಮಗಳ ಕುರಿತು ದೆಹಲಿ ಲೆಪ್ಟಿನೆಂಟ್ ಗವರ್ನರ್ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು. ಈ ಸಂಬಂಧ 11 ಅಬಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ಮನೀಶ್ ಸಿಸೋಡಿಯಾ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT