ದೇಶ

ಶಿಕ್ಷಣ ಲಾಭ ಗಳಿಸುವ ವ್ಯವಹಾರವಲ್ಲ, ಬೋಧನಾ ಶುಲ್ಕವನ್ನು ಕಡಿಮೆ ಮಾಡಬೇಕು: ಸುಪ್ರೀಂ

Vishwanath S

ನವದೆಹಲಿ: ಖಾಸಗಿ ಅನುದಾನರಹಿತ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಕೋರ್ಸ್‌ಗಳ ವಾರ್ಷಿಕ ಬೋಧನಾ ಶುಲ್ಕವನ್ನು 24 ಲಕ್ಷ ರೂ.ಗೆ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಆಂಧ್ರಪ್ರದೇಶ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು ಶುಲ್ಕ ಹೆಚ್ಚಳವು ಅಸಮಂಜಸವಾಗಿದೆ ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ಎಂ.ಆರ್ ಶಾ ಮತ್ತು ಎಂ.ಎಂ ಸುಂದ್ರೇಶ್ ಅವರಿದ್ದ ಪೀಠವು ಈ ಹಿಂದೆ ನಿಗದಿಪಡಿಸಿದ ಶುಲ್ಕದ ಏಳು ಪಟ್ಟು ಅಂದರೆ 24 ಲಕ್ಷ ರೂ.ಗೆ ಹೆಚ್ಚಿಸಿರುವುದು ಯಾವುದೇ ರೀತಿಯಲ್ಲಿ ಸಮರ್ಥನೀಯವಲ್ಲ ಎಂದು ಹೇಳಿದೆ. ಶಿಕ್ಷಣವು ಲಾಭ ಗಳಿಸುವ ವ್ಯವಹಾರವಲ್ಲ ಎಂದು ರಾಜ್ಯ ಸರ್ಕಾರ ಮತ್ತು ಅರ್ಜಿದಾರ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಸುಪ್ರೀಂ ಕೋರ್ಟ್ ತರಾಟೆ ತೆಗೆದುಕೊಂಡಿದೆ. 

ಬೋಧನಾ ಶುಲ್ಕಗಳು ಯಾವಾಗಲೂ ಕೈಗೆಟುಕುವಂತಿರಬೇಕು, ಇದನ್ನು ಎಲ್ಲಾ ವರ್ಗಗಳ ವಿದ್ಯಾರ್ಥಿಗಳು ಭರಿಸುವಂತಿರಬೇಕು. ಆದ್ದರಿಂದ, ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ(NALSA) ಮತ್ತು ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಮತ್ತು ಸಮನ್ವಯ ಯೋಜನಾ ಸಮಿತಿ (MCPC) ವೈದ್ಯಕೀಯ ಕಾಲೇಜುಗಳ ಮೇಲೆ 2.5 ಲಕ್ಷ ವೆಚ್ಚವನ್ನು  ವಿಧಿಸಿತು. 

ಖಾಸಗಿ ಅನುದಾನರಹಿತ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಕೋರ್ಸ್‌ಗಳ ವಾರ್ಷಿಕ ಬೋಧನಾ ಶುಲ್ಕವನ್ನು 24 ಲಕ್ಷ ರೂ.ಗೆ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ ಆಂಧ್ರಪ್ರದೇಶ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

SCROLL FOR NEXT