ದೇಶ

ಕಾಶ್ಮೀರ: ಆಕಸ್ಮಿಕವಾಗಿ ಸರ್ವಿಸ್ ರೈಫಲ್ ನಿಂದ ಹಾರಿದ ಗುಂಡು, ಯೋಧ ಸಾವು

Lingaraj Badiger

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಬುಧವಾರ ಸೇನಾ ಯೋಧನೊಬ್ಬ ತನ್ನ ಸರ್ವಿಸ್ ರೈಫಲ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನೆಯ ರಾಷ್ಟ್ರೀಯ ರೈಫಲ್ಸ್ ಘಟಕಕ್ಕೆ ಸೇರಿದ ಯೋಧನ ಸರ್ವಿಸ್ ರೈಫಲ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು ಅವರು ಹೇಳಿದ್ದಾರೆ.

ಘಟನೆ ಕುರಿತು ವಿಚಾರಣೆ ಪ್ರಕ್ರಿಯೆ ಆರಂಭಿಸಲಾಗಿದೆ.

SCROLL FOR NEXT