ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 811 ಹೊಸ ಪ್ರಕರಣ ಪತ್ತೆ

ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 811 ಹೊಸ ಪ್ರಕರಣ ಪತ್ತೆಯಾಗಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 811 ಹೊಸ ಪ್ರಕರಣ ಪತ್ತೆಯಾಗಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,62,952ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,511ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,559ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,271 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,18,882ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 1,29,097 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 90,20,82,659 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,75,22,436 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂತಾರಾ ಅಪಹಾಸ್ಯ ಪ್ರಕರಣ: 'ಸೂಪರ್ ಸ್ಟಾರ್ ಆದ್ರೇನು.. ನಾಲಿಗೆ ಮೇಲೆ ಹಿಡಿತ ಇರ್ಬೇಕು..': ನಟ ರಣವೀರ್ ಸಿಂಗ್ ಹೈಕೋರ್ಟ್ ಚಾಟಿ!

ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆಗೆ ಸ್ವಪಕ್ಷದಲ್ಲೇ ತೀವ್ರ ವಿರೋಧ: ಆದರೆ ದೇಶದ ಹಿತಕ್ಕಾಗಿ ಇದು ಒಳ್ಳೆಯದ್ದು ಎಂದ ಖರ್ಗೆ

ಪಶ್ಚಿಮ ಬಂಗಾಳ SIR ಪರಿಶೀಲನೆ: ಜಾರ್ಖಂಡ್-ಒಡಿಶಾ ನ್ಯಾಯಾಧೀಶರ ನಿಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ

ಜಾರ್ಖಂಡ್ ಏರ್ ಆಂಬುಲೆನ್ಸ್ ದುರಂತ: ಮೃತಪಟ್ಟ ಎಲ್ಲಾ ಏಳು ಮಂದಿ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ; Video

ಸಾಮೂಹಿಕ ಅತ್ಯಾಚಾರ: ಕೊನೆಗೂ ಮೌನ ಮುರಿದ ಸಂತ್ರಸ್ಥೆ, 'ನ್ಯಾಯಬೇಕು.. ನನ್ನಂತೆಯೇ ಸಾಕಷ್ಟು ಯುವತಿಯರಿಗೆ ದೌರ್ಜನ್ಯ'

SCROLL FOR NEXT