ದೇಶ

ನೀಟ್-ಪಿಜಿ ರದ್ದು ಸಾಧ್ಯತೆ, ಮುಂದಿನ ವರ್ಷದಿಂದ ಎಂಬಿಬಿಎಸ್ ನಿರ್ಗಮನ ಪರೀಕ್ಷೆ

Lingaraj Badiger

ನವದೆಹಲಿ: ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕಾಗಿ ಮುಂದಿನ ವರ್ಷ ಏಪ್ರಿಲ್-ಮೇನಲ್ಲಿ ನಿಗದಿಯಾಗಿರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್-ಪಿಜಿ) ಕೊನೆಯ ನೀಟ್-ಪಿಜಿ ಪರೀಕ್ಷೆಯಾಗುವ ಸಾಧ್ಯತೆ ಇದೆ.

ನಂತರ ವೈದ್ಯಕೀಯ ಪಿಜಿ ಕೋರ್ಸ್‌ಗಳ ಪ್ರವೇಶಕ್ಕಾಗಿ ನೀಟ್ ಬದಲಿಗೆ ರಾಷ್ಟ್ರೀಯ ನಿರ್ಗಮನ ಪರೀಕ್ಷೆ(ಎನ್ಇಎಕ್ಸ್ ಟಿ) ನಡೆಯಲಿದೆ. ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಎನ್ಇಎಕ್ಸ್ ಟಿ ಪರೀಕ್ಷೆಯಲ್ಲಿ ಪಡೆಯುವ ಅಂಕಗಳ ಆಧಾರದ ಮೇಲೆ ಪಿಜಿ ಕೋರ್ಸ್ ಗಳಿಗೆ ಪ್ರವೇಶ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‌ಎಂಸಿ) ಡಿಸೆಂಬರ್ 2023 ರಲ್ಲಿ ರಾಷ್ಟ್ರೀಯ ನಿರ್ಗಮನ ಪರೀಕ್ಷೆ ನಡೆಸಲು ಉದ್ದೇಶಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ತಿಳಿಸಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ಡಿಸೆಂಬರ್ 2023 ರಲ್ಲಿ ರಾಷ್ಟ್ರೀಯ ನಿರ್ಗಮನ ಪರೀಕ್ಷೆ ನಡೆದರೆ, 2019-2020ನೇ ಬ್ಯಾಚ್‌ನ ಎಂಬಿಬಿಎಸ್ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ.

ದೇಶ ಅಥವಾ ವಿದೇಶಗಳಲ್ಲಿ ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳಿಗೆಲ್ಲರಿಗೂ ರಾಷ್ಟ್ರೀಯ ನಿರ್ಗಮನ ಪರೀಕ್ಷೆ ಒಂದೇ ಆಗಿರುತ್ತದೆ. ಹೀಗಾಗಿ ವಿದೇಶಗಳಲ್ಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ ಅಧ್ಯಯನ ಮಾಡಿರುವವರು ಎದುರಿಸುತ್ತಿರುವ ಸಮಸ್ಯೆಗೆ ಎನ್‌ಇಎಕ್ಸ್‌ಟಿಯಿಂದ ಪರಿಹಾರ ಸಿಗುವ ಸಾಧ್ಯತೆ ಇದೆ.

SCROLL FOR NEXT