ರಂಜನ್ ಗೊಗೊಯ್ 
ದೇಶ

ರಾಜ್ಯಸಭೆಗೆ ನಿವೃತ್ತ ಸಿಜೆಐ ರಂಜನ್ ಗೊಗೊಯ್ ನಾಮನಿರ್ದೇಶನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'

ರಾಜ್ಯಸಭೆಗೆ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ನಾಮನಿರ್ದೇಶನ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನವದೆಹಲಿ: ರಾಜ್ಯಸಭೆಗೆ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ನಾಮನಿರ್ದೇಶನ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. 

ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಅಭಯ್ ಎಸ್ ಓಕಾ ಅವರ ಪೀಠ, ಇದೊಂದು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಾಗಿದೆ ಎಂದು ಹೇಳಿದೆ. ಮಾಜಿ ಸಿಜೆಐ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳಲು ಅರ್ಹರಲ್ಲ ಎಂದು ಅರ್ಜಿದಾರ ಸತೀಶ್ ಎಸ್ ಕಂಬಿಯಾ ಅವರ ವಕೀಲರು ಅರ್ಜಿ ಸಲ್ಲಿಸಿದರು. ಅರ್ಹತೆಯನ್ನು ಯಾರು ನಿರ್ಧರಿಸುತ್ತಾರೆ ಎಂದು ಪೀಠ ಕೇಳಿದೆ? ಇನ್ನು ಈ ಅರ್ಜಿಯ ಮುಖ್ಯತ್ವವಿಲ್ಲ ಏನು ಎಂಬುದು ಕಂಡುಬಂದಿಲ್ಲ. ಈ ಅರ್ಜಿ ಸಂಬಂಧ ನಿಮ್ಮ ಮೇಲೆ ಯಾವುದೇ ದಂಡವನ್ನು ವಿಧಿಸದಿರುವುದು ನಿಮ್ಮ ಅದೃಷ್ಟ ಎಂದು ಪೀಠ ಹೇಳಿದೆ.

ನ್ಯಾಯಮೂರ್ತಿ ಗೊಗೊಯ್ ಅವರು ಅಯೋಧ್ಯೆ ಭೂ ವಿವಾದ ಪ್ರಕರಣ ಸೇರಿದಂತೆ ಹಲವು ಪ್ರಮುಖ ನಿರ್ಧಾರ ಪೀಠಗಳ ನೇತೃತ್ವವಹಿಸಿದ್ದರು. ಇನ್ನು 2020ರ ಮಾರ್ಚ್ 16 ರಂದು ಅವರನ್ನು ಸರ್ಕಾರವು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತು. 

ರಫೇಲ್ ಫೈಟರ್ ಜೆಟ್ ಒಪ್ಪಂದ ಮತ್ತು ಪ್ರಸಿದ್ಧ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದಂತಹ ವಿಷಯಗಳ ಬಗ್ಗೆ ತೀರ್ಪು ನೀಡಿದ ಪೀಠಗಳ ನೇತೃತ್ವವನ್ನು ಗೊಗೊಯ್ ವಹಿಸಿದ್ದರು. ಗೊಗೊಯ್ 13 ತಿಂಗಳ ಅವಧಿಯ ನಂತರ ನವೆಂಬರ್ 2019ರಲ್ಲಿ ಸಿಜೆಐ ಆಗಿ ನಿವೃತ್ತರಾದರು. ಗೊಗೊಯ್ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಭಾರತದ ಮೊದಲ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಮಾಜಿ ಮುಖ್ಯ ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಅವರು ರಾಜ್ಯಸಭಾ ಸದಸ್ಯರಾಗಿದ್ದರು. ಆದರೆ ಕಾಂಗ್ರೆಸ್ ಪಕ್ಷದ ಟಿಕೆಟ್‌ನಲ್ಲಿ ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT