ದೇಶ

ಎಲ್ಲ ಅಂಶಗಳಲ್ಲೂ ನಾಗರಿಕರ ಬಗ್ಗೆ ಕಾಳಜಿ ವಹಿಸುತ್ತೇನೆ: ಸಿಜೆಐ ಡಿವೈ ಚಂದ್ರಚೂಡ್

Manjula VN

ನವದೆಹಲಿ: ನೂತನವಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ದೇಶದ ಜನರ ಸೇವೆಯೇ ನನ್ನ ಆದ್ಯತೆ ಎಂದು ಬುಧವಾರ ಹೇಳಿದ್ದಾರೆ.

ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸುಪ್ರೀಂ ಕೋರ್ಟ್ ಆವರಣಕ್ಕೆ ಆಗಮಿಸಿದ ಸಿಜೆಐ ಚಂದ್ರಚೂಡ್ ಅವರು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಗೆ ಪುಷ್ಪ ನಮನ ಸಲ್ಲಿಸಿದರು.

ಬಳಿಕ ಮಾತನಾಡಿ,"ಸಾಮಾನ್ಯ ಜನರಿಗೆ ಸೇವೆ ಸಲ್ಲಿಸುವುದು ನನ್ನ ಆದ್ಯತೆಯಾಗಿದೆ, ದೇಶ ಎಲ್ಲಾ ನಾಗರೀಕರಿಗಾಗಿ ಕೆಲಸ ಮಾಡುತ್ತೇನೆ. ಅದು ತಂತ್ರಜ್ಞಾನದಲ್ಲಿರಲಿ ಅಥವಾ ನ್ಯಾಯಾಂಗ ಸುಧಾರಣೆಗಳಲ್ಲಿರಲಿ, ಎಲ್ಲಾ ಅಂಶಗಳಲ್ಲೂ ನಾಗರಿಕರ ಬಗ್ಗೆ ಕಾಳಜಿ ವಹಿಸುತ್ತೇನೆಂದು ಹೇಳಿದ್ದಾರೆ.

ಭಾರತೀಯ ನ್ಯಾಯಾಂಗದ ಮುಖ್ಯಸ್ಥನಾಗಿರುವುದು ನನಗೆ ಸಿಕ್ಕಿರುವ ಉತ್ತಮ ಅವಕಾಶ ಮತ್ತು ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ನ್ಯಾಯಾಂಗದಲ್ಲಿ ಜನರ ನಂಬಿಕೆಯನ್ನು ಹೇಗೆ ಖಾತ್ರಿಪಡಿಸುತ್ತೀರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ, ಮಾತಿನ ಮೂಲಕ ಮಾತ್ರವಲ್ಲ, ನನ್ನ ಕೆಲಸದ ಮೂಲಕ ನಾಗರಿಕರ ವಿಶ್ವಾಸವನ್ನು ಪಡೆದುಕೊಳ್ಳುತ್ತೇನೆಂದಿದ್ದಾರೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಚಂದ್ರಚೂಡ್ ಅವರು ನವೆಂಬರ್ 10, 2024 ರವರೆಗೆ ಅಧಿಕಾರಾವಧಿ ಹೊಂದಿರುತ್ತಾರೆ.

SCROLL FOR NEXT