ರವೀಂದ್ರ ಜಡೇಜಾ, ಪತ್ನಿ ರಿವಾಬ 
ದೇಶ

ಗುಜರಾತ್ ಚುನಾವಣೆ: ಜಾಮ್ ನಗರ ಉತ್ತರ ಕ್ಷೇತ್ರದಿಂದ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ರಿವಾಬ ಅಖಾಡಕ್ಕೆ!

ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಪ್ರಕಟವಾಗಿದ್ದು, ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬ ಜಾಮ್ ನಗರ ಉತ್ತರ ಕ್ಷೇತ್ರದಿಂದ ಅಖಾಡಕ್ಕಿಳಿಯಲು ಬಿಜೆಪಿ ಟಿಕೆಟ್ ಸಿಕ್ಕಿದೆ.

ಜಾಮ್ ನಗರ: ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಪ್ರಕಟವಾಗಿದ್ದು, ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬ ಜಾಮ್ ನಗರ ಉತ್ತರ ಕ್ಷೇತ್ರದಿಂದ ಅಖಾಡಕ್ಕಿಳಿಯಲು ಬಿಜೆಪಿ ಟಿಕೆಟ್ ಸಿಕ್ಕಿದೆ.

ರಿವಾಬ 2019ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಕಳೆದ ಕೆಲವು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯವಾಗಿರುವ ಅವರು, ತಳಮಟ್ಟದಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ರವೀಂದ್ರ ಜಡೇಜಾ ಹಾಗೂ ರಿವಾಬ ಚಾರಿಟಿ ಕಾರ್ಯಗಳಿಗೆ ಹೆಸರುವಾಸಿಯಾಗಿದ್ದಾರೆ.

ಕಳೆದ ವರ್ಷ ತಮ್ಮ ಮಗಳ 5ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ 101 ಬಾಲಕಿಯರಿಗೆ ಸುಕನ್ಯಾ ಸಮೃದ್ದಿ ಬ್ಯಾಂಕ್ ಖಾತೆಗಳನ್ನು ತೆರೆಯುವ ಮೂಲಕ  ಅವರು ಸುದ್ದಿಯಾಗಿದ್ದರು. ಹೆಣ್ಣು ಮಕ್ಕಳು ಆರ್ಥಿಕವಾಗಿ ಸಬಲರಾಗಲು ನೆರವು ಹಾಗೂ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೂಡಾ ರಿವಾಬ್ ಅವರಿಗೆ ಪತ್ರ ಬರೆುವ ಮೂಲಕ ಅವರ ಚಾರಿಟಿ ಕೆಲಸಗಳನ್ನು ಕೊಂಡಾಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT