ದೇಶ

ಗುಜರಾತ್ ವಿಧಾನಸಭೆ ಚುನಾವಣೆ: ಬಿಜೆಪಿ 160 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಘಟ್ಲೋಡಿಯಾ ಕ್ಷೇತ್ರದಿಂದ ಸಿಎಂ ಭೂಪೇಂದ್ರ ಪಟೇಲ್ ಸ್ಪರ್ಧೆ

Manjula VN

ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಗುರುವಾರ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪಟ್ಟಿಯಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಘಟ್ಲೋಡಿಯಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆಂದು ತಿಳಿದುಬಂದಿದೆ.

ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರಾದ ಮನ್ಸುಖ್ ಮಾಂಡವಿಯಾ, ಭೂಪೇಂದರ್ ಯಾದವ್ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್ ಅವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದರು.

ಚುನಾವಣೆಯಲ್ಲಿ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರಿಗೆ ಟಿಕೆಟ್ ಸಿಕ್ಕಿದ್ದು, ರಿವಾಬಾ ಅವರು ಜಾಮ್‌ನಗರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ,

ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿರುವ ಹಾರ್ದಿಕ್ ಪಟೇಲ್ ಅವರು ವಿರಾಮಗಾಂ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಅವರು ಮಜುರಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

182 ಸದಸ್ಯ ಬಲದ ಗುಜರಾತ್ ವಿಧಾನಸಭಾ ಚುನಾವಣೆಯು ಡಿ.1 ಹಾಗೂ 5ರಂದು ಎರಡು ಹಂತದಲ್ಲಿ ನಡೆಯಲಿದೆ. ಡಿ.8ರಂದು ಫಲಿತಾಂಶ ಪ್ರಕಟವಾಗಲಿದೆ.

SCROLL FOR NEXT