ದೇಶ

ಗುಜರಾತ್ ಚುನಾವಣೆ: ಹಾಲಿ ಸಚಿವ, ಮೊರ್ಬಿ ಶಾಸಕ ಮೆರ್ಜಾಗೆ ಟಿಕೆಟ್ ನಿರಾಕರಿಸಿದ ಬಿಜೆಪಿ

Lingaraj Badiger

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಗುರುವಾರ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಐವರು ಸಚಿವರು ಸೇರಿದಂತೆ 38 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.

ಕಳೆದ ತಿಂಗಳು ಮೊರ್ಬಿಯಲ್ಲಿ ಸೇತುವೆ ಕುಸಿದು 135 ಮಂದಿ ಸಾವನ್ನಪ್ಪಿದ್ದು, ಮೊರ್ಬಿ ಶಾಸಕ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ ಬ್ರಿಜೇಶ್ ಮೆರ್ಜಾ ಅವರು ಬಿಜೆಪಿ ಘೋಷಿಸಿದ 160 ಅಭ್ಯರ್ಥಿಗಳ ಪಟ್ಟಿಯಿಂದ ಕೈಬಿಡಲಾಗಿದೆ.

 2012 ಮತ್ತು 2017ರಲ್ಲಿ ಕಚ್ ಜಿಲ್ಲೆಯ ಭುಜ್ ಕ್ಷೇತ್ರದಿಂದ ಗೆದ್ದಿದ್ದ ಗುಜರಾತ್ ವಿಧಾನಸಭೆ ಸ್ಪೀಕರ್ ನಿಮಾಬೆನ್ ಆಚಾರ್ಯ ಅವರಿಗೂ ಈ ಬಾರಿ ಬಿಜೆಪಿ ಟಿಕೆಟ್ ನಿರಾಕರಿಸಲಾಗಿದೆ.

ಡಿಸೆಂಬರ್ 1 ಮತ್ತು 5 ರಂದು ನಡೆಯಲಿರುವ 182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಎರಡು ಹಂತದ ಚುನಾವಣೆಗೆ ಬಿಜೆಪಿ ಗುರುವಾರ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪಕ್ಷವು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರನ್ನು ಅವರ ಕ್ಷೇತ್ರ ಘಟ್ಲೋಡಿಯಾದಿಂದ ಕಣಕ್ಕಿಳಿಸಿದೆ ಮತ್ತು ಹಲವಾರು ಹಾಲಿ ಶಾಸಕರನ್ನು ಕೈಬಿಟ್ಟಿದೆ.

SCROLL FOR NEXT