ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಸಹಚರ ಸೇರಿ ಮೂವರ ಬಂಧನ

ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜೈಶ್-ಎ-ಮೊಹಮ್ಮದ್‌ ಉಗ್ರ ಸಂಘಟನೆಯ ಸಹಚರ ಸೇರಿ ಮೂವರನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜೈಶ್-ಎ-ಮೊಹಮ್ಮದ್‌ ಉಗ್ರ ಸಂಘಟನೆಯ ಸಹಚರ ಸೇರಿ ಮೂವರನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರಿಂದ ಪೊಲೀಸರು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ಬಂಧಿತರನ್ನು ಪುಚಿಲ್ ಪಂಪೋರಾದ ಚಾಲಕ ಮೊಹಮ್ಮದ್ ಯಾಸೀನ್, ಫರ್ಹಾನ್ ಫಾರೂಕ್ ಮತ್ತು ಡ್ರಂಗ್ಬಾಲ್ ಪಾಂಪೋರ್‌ನ ಫಾರೂಕ್ ಅಹ್ಮದ್ ಎಂದು ಗುರುತಿಸಲಾಗಿದೆ.

ಮಂಗಳವಾರ ಮತ್ತು ಬುಧವಾರದ ಮಧ್ಯರಾತ್ರಿ ತ್ರಿಕೂಟ ನಗರ ಠಾಣೆಯ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಕ್ಲಿಯರ್ ಮಾಡುತ್ತಿದ್ದ ವೇಳೆ ನರ್ವಾಲ್‌ನಲ್ಲಿ ತೈಲ ಟ್ಯಾಂಕರ್ ವೊಂದನ್ನು ತೆಡೆದಿದ್ದಾರೆ.

ಈ ವೇಳೆ ಚಾಲಕನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ತನ್ನು ಇಬ್ಬರು ಸಹಚರರೊಂದಿಗೆ ಪೊಲೀಸರೊಂದಿಗೆ ಜಗಳಕ್ಕಿಳಿದಿದ್ದಾನೆ. ಈ ಹಿನ್ನೆಲೆಯಲ್ಲಿ ಮೂವರನ್ನು ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ

ವಿಚಾರಣೆಯ ವೇಳೆ ಮೂವರ ಪೈಕಿ ಓರ್ವ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವನೆಂದು ತಿಳಿದುಬಂದಿದೆ. ಪಾಕಿಸ್ತಾನದಲ್ಲಿರುವ ಜೆಎಂನ ಹ್ಯಾಂಡ್ಲರ್ ಶಹಬಾಜ್ ಸೂಚನೆಯ ಮೇರೆಗೆ ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳಲು ಜಮ್ಮುವಿಗೆ ಬಂದಿರುವುದಾಗಿ ಚಾಲಕ ಯಾಸೀನ್ ಬಹಿರಂಗಪಡಿಸಿದ್ದಾನೆ.

ತೈಲ ಟ್ಯಾಂಕರ್‌ನಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ರವಾನೆಯನ್ನು ಮಾಡುತ್ತಿದ್ದ ಬಗ್ಗೆ ಯಾಸೀನ್ ತಪ್ಪೊಪ್ಪಿಕೊಂಡಿದ್ದಾನೆ.

ಇದರ ನಂತರ, ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಟ್ಯಾಂಕರ್​ನ್ನು ಮತ್ತೊಮ್ಮೆ ಶೋಧಿಸಲಾಯಿತು ಈ ವೇಳೆ ಟ್ಯಾಂಕರ್ ನಲ್ಲಿ ಮೂರು ಎಕೆ -56 ರೈಫಲ್ಗಳು, ಒಂದು ಪಿಸ್ತೂಲ್, ಒಂಬತ್ತು ಮ್ಯಾಗಜೀನ್ಗಳು, 191 ಸುತ್ತಿನ ಮದ್ದುಗುಂಡುಗಳು ಮತ್ತು ಆರು ಗ್ರೆನೇಡ್ಗಳು ದೊರೆತಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳು ಇತರೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ಹಾಗೂ ಅವರ ಪೂರ್ವಾಪರಗಳನ್ನು ತಿಳಿದುಕೊಳ್ಳಲು ಉನ್ನತ ಮಟ್ಟದ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel