ಶರದ್ ಪವಾರ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವುತ್ 
ದೇಶ

ಭಾರತ್ ಜೋಡೋ ಯಾತ್ರೆ ದೇಶವನ್ನು ಒಂದುಗೂಡಿಸುವ ಚಳುವಳಿ; ಶರದ್ ಪವಾರ್ ಭೇಟಿ ಬಳಿಕ ಸಂಜಯ್ ರಾವುತ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು "ಕಹಿ ವಾತಾವರಣ"ವನ್ನು ಕೊನೆಗೊಳಿಸಲು ಮತ್ತು ದೇಶವನ್ನು ಒಂದುಗೂಡಿಸಲು ನಡೆಯುತ್ತಿರುವ ಚಳುವಳಿಯಾಗಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಗುರುವಾರ ಹೇಳಿದ್ದಾರೆ.

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು "ಕಹಿ ವಾತಾವರಣ"ವನ್ನು ಕೊನೆಗೊಳಿಸಲು ಮತ್ತು ದೇಶವನ್ನು ಒಂದುಗೂಡಿಸಲು ನಡೆಯುತ್ತಿರುವ ಚಳುವಳಿಯಾಗಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಗುರುವಾರ ಹೇಳಿದ್ದಾರೆ.

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ನಂತರ ರಾವುತ್ ಸುದ್ದಿಗಾರರೊಂದಿಗೆ ಮಾತನಾಡಿದರು.

'ಭಾರತ್ ಜೋಡೋ ಯಾತ್ರೆಯು ದೇಶವನ್ನು ಒಗ್ಗೂಡಿಸುವ ಮತ್ತು ಕಹಿ ವಾತಾವರಣವನ್ನು ಕೊನೆಗೊಳಿಸುವ ಆಂದೋಲನವಾಗಿದೆ. ಇದನ್ನು ಸ್ವಾಗತಿಸಬೇಕು ಎಂದ ಅವರು, ಪವಾರ್ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದೇನೆ ಎಂದು ಸೇನಾ ನಾಯಕ ಹೇಳಿದರು.

ರಾಜ್ಯಸಭಾ ಸದಸ್ಯ ರಾವುತ್ ಅವರು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಮೂರು ತಿಂಗಳ ನಂತರ ಬುಧವಾರ (ನ.09) ಜಾಮೀನಿನ ಮೇಲೆ ಬಿಡುಗಡೆಯಾದರು.

ಜಾಮೀನು ನೀಡುವ ವೇಳೆ ನ್ಯಾಯಾಲಯ ಹೇಳಿದ್ದಿಷ್ಟು...

ರಾಯಗಢ ಜಿಲ್ಲೆಯ ಆಲಿಬಾಗ್ ಬಳಿಯ ಕಿಹಿಮ್‌ನಲ್ಲಿ ಪ್ಲಾಟ್‌ಗಳನ್ನು ಖರೀದಿಸಲು ಶಿವಸೇನಾ ಸಂಸದ ಸಂಜಯ್ ರಾವುತ್ ಅವರು ಕೆಲವು 'ಲೆಕ್ಕದಲ್ಲಿಲ್ಲದ ಹಣವನ್ನು' ವ್ಯವಹರಿಸಿದ್ದಾರೆ. ಆದರೆ, ನಿಬಂಧನೆಗಳ ಅಡಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಗ ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ಮುಂಬೈ ವಿಶೇಷ ನ್ಯಾಯಾಲಯ ಹೇಳಿದೆ.

ವಿಶೇಷ ಪಿಎಂಎಲ್‌ಎ ನ್ಯಾಯಾಲಯದ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ ಅವರು, ಆಗಸ್ಟ್ 1 ರಂದು ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧಿಸಲ್ಪಟ್ಟ ಸಂಜಯ್ ರಾವುತ್ ಅವರಿಗೆ ಪತ್ರಾ ಚಾಲ್ ಪುನರಾಭಿವೃದ್ಧಿ ಯೋಜನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ನೀಡುವಾಗ ಬುಧವಾರ ಈ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT