ದೇಶ

ಜ್ಞಾನವಾಪಿ ಕಾಶಿ ವಿಶ್ವನಾಥ ಪ್ರಕರಣ: ನಾಳೆ ನ್ಯಾಯಪೀಠ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

Sumana Upadhyaya

ನವದೆಹಲಿ: ಜ್ಞಾನವಾಪಿ ಕಾಶಿ ವಿಶ್ವನಾಥ್‌ ಪ್ರಕರಣದ(Gyanvapi Kashi Vishwanatha case) ವಿಚಾರಣೆಗೆ ನ್ಯಾಯಪೀಠ ಸ್ಥಾಪಿಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ಒಪ್ಪಿಗೆ ಸೂಚಿಸಿದೆ. ಜ್ಞಾನವಾಪಿ ಆವರಣದಲ್ಲಿ ಶಿವಲಿಂಗ ಪತ್ತೆಯಾದ ಜಾಗದ ರಕ್ಷಣೆಗೆ ಆದೇಶ ನೀಡುವಂತೆ ಹಿಂದೂ ಸಂಘಟನೆಗಳು ಕೋರ್ಟ್ ಮೊರೆ ಹೋಗಿವೆ. 

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ನಿನ್ನೆ ಗುರುವಾರ ಕೆಲವು ಹಿಂದೂ ಭಕ್ತರ ಪರ ವಾದ ಮಂಡಿಸಿದ ವಕೀಲ ವಿಷ್ಣು ಶಂಕರ್ ಜೈನ್ ಅವರ ಅರ್ಜಿಯನ್ನು ಪರಿಶೀಲಿಸಿತು. ಶಿವಲಿಂಗಕ್ಕೆ ರಕ್ಷಣೆ ನೀಡುವ ಆದೇಶವು ನಾಡಿದ್ದು ಅಂದರೆ ನವೆಂಬರ್ 12 ರಂದು ಮುಕ್ತಾಯಗೊಳ್ಳಲಿದೆ. 

ನಾಳೆ ಮಧ್ಯಾಹ್ನ 3 ಗಂಟೆಗೆ ನ್ಯಾಯಪೀಠವನ್ನು ರಚಿಸುತ್ತೇವೆ ಎಂದು ಸಿಜೆಐ ಹೇಳಿದ್ದಾರೆ. ವಾರಣಾಸಿಯ ಜ್ಞಾನವಾಪಿ ಆವರಣದೊಳಗಿನ ಪ್ರದೇಶವನ್ನು ಸಂರಕ್ಷಿಸುವಂತೆ ಮೇ 17 ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶವನ್ನು ನೀಡಿತ್ತು.

SCROLL FOR NEXT