ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ 
ದೇಶ

ಸಿಜೆಐ ಚಂದ್ರಚೂಡ್ ನೇಮಕ ಪ್ರಶ್ನಿಸಿ ಪಿಐಎಲ್: 1 ಲಕ್ಷ ರೂ. ದಂಡದೊಂದಿಗೆ ಅರ್ಜಿ ವಜಾ

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇಮಕವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ 1 ಲಕ್ಷ ರೂ. ದಂಡದೊಂದಿಗೆ ವಜಾಗೊಳಿಸಿದೆ. 

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇಮಕವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ 1 ಲಕ್ಷ ರೂ. ದಂಡದೊಂದಿಗೆ ವಜಾಗೊಳಿಸಿದೆ. 

ಇದೊಂದು ಪ್ರಚಾರ  ಹಿತಾಸಕ್ತಿಯ ದಾವೆ ಎಂದು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ  ಸುಬ್ರಮಣಿಯನ್ ಪ್ರಸಾದ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು. ಕೇವಲ ಪ್ರಚಾರದ ಉದ್ದೇಶದಿಂದ ಈ ಅರ್ಜಿ ಸಲ್ಲಿಸಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿತು.

ಸಂವಿಧಾನಕ್ಕೆ ವಿರುದ್ಧವಾಗಿ ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನು ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಗ್ರಾಮ ಉದಯ ಫೌಂಡೇಷನ್ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಎಂದು ಹೇಳಿ ಸಂಜೀವ್ ಕುಮಾರ್ ತಿವಾರಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 9 ರಂದು ದೇಶದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡರು. ಕಳೆದ ವಾರ ಸುಪ್ರೀಂಕೋರ್ಟ್ ಕೂಡಾ ಇದೇ ರೀತಿಯ ಅರ್ಜಿಯನ್ನು ವಜಾಗೊಳಿಸಿತು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT