ಸತೀಶ್ ಜಾರಕಿಹೊಳಿ 
ದೇಶ

ಶಿವಾಜಿ ಊಟದಲ್ಲಿ ವಿಷ ಹಾಕಿದ್ದಕ್ಕೆ ಸಂಭಾಜಿಯನ್ನ ಬ್ರಿಟಿಷರು ಹತ್ಯೆ ಮಾಡಿದ್ರು: ನಾನ್‌ಸೆನ್ಸ್‌ ಹೇಳಿಕೆಯನ್ನು ನೀವು ಒಪ್ಪುತ್ತೀರಾ ರಾಹುಲ್ ಗಾಂಧಿ ಅವರೇ?

‘ಹಿಂದೂ’ ಎಂಬ ಪದಕ್ಕೆ ಕೆಟ್ಟ ಅರ್ಥಗಳಿವೆ ಎಂದು ಹೇಳುವ ಮೂಲಕ ದೇಶವ್ಯಾಪಿ ವಿರೋಧಕ್ಕೆ ಕಾರಣವಾಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಸುತ್ತ ಈಗ ಮತ್ತೊಂದು ವಿವಾದ ಸುತ್ತಿಕೊಂಡಿದೆ.

ಬೆಳಗಾವಿ: ‘ಹಿಂದೂ’ ಎಂಬ ಪದಕ್ಕೆ ಕೆಟ್ಟ ಅರ್ಥಗಳಿವೆ ಎಂದು ಹೇಳುವ ಮೂಲಕ ದೇಶವ್ಯಾಪಿ ವಿರೋಧಕ್ಕೆ ಕಾರಣವಾಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಸುತ್ತ ಈಗ ಮತ್ತೊಂದು ವಿವಾದ ಸುತ್ತಿಕೊಂಡಿದೆ.

ನಿಪ್ಪಾಣಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ  ನೀಡಿದ ಮತ್ತೊಂದು ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಹೇಳಿಕೆಯ ವಿಡಿಯೋ ವೈರಲ್  ಆಗುತ್ತಿದೆ.

ಧರ್ಮವೀರ ಸಂಭಾಜಿ ಮಹಾರಾಜರನ್ನ ಬ್ರಿಟಿಷರು ಹಿಡಿದು ಹತ್ಯೆ ಮಾಡಿದರು ಎಂದಿರುವ ಸತೀಶ ಜಾರಕಿಹೊಳಿ ವಿಡಿಯೋವನ್ನು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಟ್ವಿಟರ್​ನಲ್ಲಿ ಹಂಚಿಕೊಂಡು ಈ ರೀತಿಯ ನಾನ್‌ಸೆನ್ಸ್‌ ಹೇಳಿಕೆಯನ್ನು ನೀವು ಒಪ್ಪುತ್ತೀರಾ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.

ನಿಪ್ಪಾಣಿಯಲ್ಲಿ ನವೆಂಬರ್ 6ರಂದು ನಡೆದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಧರ್ಮವೀರ ಸಂಭಾಜಿ ಮಹಾರಾಜರನ್ನ ಬ್ರಿಟಿಷರು ಹಿಡಿದು ಹತ್ಯೆ ಮಾಡಿದರು ಎಂದಿದ್ದಾರೆ. ಧರ್ಮವೀರ ಮಹಾರಾಜರನ್ನು ಏಕೆ ಹತ್ಯೆ ಮಾಡಿದರು? ಅವರು ಶಿವಾಜಿ ಮಹಾರಾಜರ ಊಟದಲ್ಲಿ ವಿಷ ಹಾಕಿದ್ದರು. ಹೀಗಾಗಿ ಅವರನ್ನು ಹಿಡಿದು ಬ್ರಿಟಿಷರ ಹತ್ಯೆ ಮಾಡಿದರು ಎಂದಿದ್ದಾರೆ.

ಸದ್ಯ ಸತೀಶ್ ಜಾರಕಿಹೊಳಿ ನೀಡಿದ ವಿವಾದಾತ್ಮಕ ಹೇಳಿಕೆಯ 42 ಸೆಕೆಂಡ್​ಗಳುಳ್ಳ ಈ ವಿಡಿಯೋ ವೈರಲ್ ಆಗುತ್ತಿದೆ. ಭಾಷಣದ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಅವರು ಈ ರೀತಿಯ ನಾನ್‌ಸೆನ್ಸ್‌ ಹೇಳಿಕೆಯನ್ನು ನೀವು ಒಪ್ಪುತ್ತೀರಾ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಗೆ ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್‌ನ ಎಂಎಲ್‌ಎ ಒಬ್ಬರು ಈ ರೀತಿ ಮಹಾನ್‌ ನಾಯಕ ಸಂಭಾಜಿ ಮಹಾರಾಜರ ಬಗ್ಗೆ ಹೇಳುವುದನ್ನು ನೀವು ಒಪ್ಪುತ್ತೀರಾ? ಸಂಭಾಜಿ ಮಹಾರಾಜರ ಬಗ್ಗೆ ತಪ್ಪು ಮಾಹಿತಿ ನೀಡುವ, ದಾರಿ ತಪ್ಪಿಸುವ, ಅವಮಾನ ಮಾಡುವ ಹೇಳಿಕೆ ಇದು ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಇದು ನಿಮ್ಮ ಕಾಂಗ್ರೆಸ್‌ ಪಕ್ಷದ ಅಧಿಕೃತ ಹೇಳಿಕೆಯೇ ಮಿಸ್ಟರ್‌ ರಾಹುಲ್‌ ಎಂದು ಪ್ರಶ್ನಿಸಿದ್ದಾರೆ. ಮಹಾರಾಷ್ಟ್ರವು ಇದನ್ನು ಒಪ್ಪುವುದಿಲ್ಲ ಎಂದೂ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT