ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಶೋಪಿಯಾನ್ ಎನ್ಕೌಂಟರ್: ಜೆಇಎಂ ಉಗ್ರ ಸಂಘಟನೆ ಓರ್ವ ಭಯೋತ್ಪಾದಕ ಹತ, ಮುಂದುವರೆದ ಕಾರ್ಯಾಚರಣೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಸಂಗ್ರಹ ಚಿತ್ರ
Manjula VN
Updated On : 11 Nov 2022, 11:48 am

ಶೋಪಿಯಾನ್ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಶೋಪಿಯಾನ್'ನ ಕಾಪ್ರೆನ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆಗಿಳಿದಿತ್ತು.

ಇದನ್ನೂ ಓದಿ: ಜಮ್ಮು-ಕಾಶ್ಮೀರ: ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಸಹಚರ ಸೇರಿ ಮೂವರ ಬಂಧನ

Advertisement

Advertisement

ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತುವರೆದೆ ಸೇನಾಪಡೆ ಎನ್ಕೌಂಟರ್ ಆರಂಭಿಸಿ ಇದೀಗ ಓರ್ವ ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ಹತ್ಯೆಯಾದ ಉಗ್ರನನ್ನು ಕಮ್ರನ್ ಬಾಯ್ ಅಲಿಯಾಸ್ ಹನೀಸ್ ಎಂದು ಗುರ್ತಿಸಲಾಗಿದೆ. ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement