ಗುಜರಾತ್ ಕಾಂಗ್ರೆಸ್ ಮುಖಂಡರ ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ 21 ಹಾಲಿ ಶಾಸಕರಿಗೆ ಟಿಕೆಟ್

ಗುಜರಾತ್ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ 46 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡಿದ್ದು, 21 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ನಾಲ್ವರು ಮುಸ್ಲಿಂ ಅಭ್ಯರ್ಥಿಗಳಿದ್ದಾರೆ.  

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ 46 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡಿದ್ದು, 21 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ನಾಲ್ವರು ಮುಸ್ಲಿಂ ಅಭ್ಯರ್ಥಿಗಳಿದ್ದಾರೆ.  

ಒಟ್ಟು 182 ಸ್ಥಾನಗಳುಳ್ಳ ಗುಜರಾತ್ ವಿಧಾನಸಭೆಯ 89 ಸ್ಥಾನಗಳಿಗೆ ಡಿಸೆಂಬರ್ 1 ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 4 ರಂದು 43 ಕ್ಷೇತ್ರಗಳ ಅಭ್ಯರ್ಥಿಗಳ  ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಇದರಲ್ಲಿ ಮೊದಲ ಹಾಗೂ ಎರಡನೇ ಹಂತದ ಚುನಾವಣೆ ನಡೆಯಲಿರುವ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿತ್ತು. ಆದರೆ, ಎರಡನೇ ಪಟ್ಟಿಯಲ್ಲಿ ಪ್ರಕಟಿಸಿರುವ ಎಲ್ಲಾ 46 ಅಭ್ಯರ್ಥಿಗಳು ಮೊದಲ ಹಂತದ ಚುನಾವಣೆಯಲ್ಲಿ ಅಖಾಡಕ್ಕಿಳಿಯಲಿದ್ದಾರೆ.

ಕಾಂಗ್ರೆಸ್ ಈವರೆಗೂ ಮೊದಲ ಹಂತದ 68 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇನ್ನೂ 21 ಸ್ಥಾನಗಳಿಗೆ ಹೆಸರು ಪ್ರಕಟಿಸಬೇಕಾಗಿದೆ. ಮೊದಲ ಹಂತದಲ್ಲಿ 89 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗಾಗಿ ಬಿಜೆಪಿ 84 ಅಭ್ಯರ್ಥಿಗಳನ್ನು ಪ್ರಕಟಿಸಿದೆ.

ಡಿಸೆಂಬರ್ 1 ಮತ್ತು 5 ರಂದು ಎರಡು ಹಂತದಲ್ಲಿ ಗುಜರಾತ್ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತಗಳ ಎಣಿಕೆ ಪ್ರಕ್ರಿಯೆ ನಡೆದು ಅಂದೇ ಫಲಿತಾಂಶ ಹೊರಬೀಳಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ತಂದೆ-ಮಗನ ವಿರುದ್ಧ ಪ್ರಕರಣ ದಾಖಲು

SCROLL FOR NEXT