ಸುಪ್ರೀಂಕೋರ್ಟ್ 
ದೇಶ

ಮುಂದಿನ ಆದೇಶದವರೆಗೆ ಜ್ಞಾನವಾಪಿ ಮಸೀದಿ 'ಶಿವಲಿಂಗ ಪ್ರದೇಶ'ದ ರಕ್ಷಣೆ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ

ವಾರಾಣಸಿಯ ಜ್ಞಾನವಾಪಿ-ಶೃಂಗಾರ್‌ ಗೌರಿ ಸಂಕೀರ್ಣ ಆವರಣದಲ್ಲಿ  ಶಿವಲಿಂಗ' ಪತ್ತೆಯಾಗಿದೆ ಎಂದು ಹೇಳಲಾದ ಪ್ರದೇಶದ ರಕ್ಷಣೆಯನ್ನು ಮುಂದಿನ ಆದೇಶದವರೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ವಿಸ್ತರಿಸಿದೆ.

ನವದೆಹಲಿ: ವಾರಾಣಸಿಯ ಜ್ಞಾನವಾಪಿ-ಶೃಂಗಾರ್‌ ಗೌರಿ ಸಂಕೀರ್ಣ ಆವರಣದಲ್ಲಿ  ಶಿವಲಿಂಗ' ಪತ್ತೆಯಾಗಿದೆ ಎಂದು ಹೇಳಲಾದ ಪ್ರದೇಶದ ರಕ್ಷಣೆಯನ್ನು ಮುಂದಿನ ಆದೇಶದವರೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ವಿಸ್ತರಿಸಿದೆ.

ಜ್ಞಾನವಾಪಿ ವಿವಾದ ಕುರಿತ ಎಲ್ಲಾ ದಾವೆಗಳ ಕ್ರೊಢೀಕರಣಕ್ಕಾಗಿ ವಾರಾಣಸಿಯ ಜಿಲ್ಲಾ ನ್ಯಾಯಾಧೀಶರ ಮುಂದೆ ಅರ್ಜಿ ಸಲ್ಲಿಸುವಂತೆ ಹಿಂದೂ ಅರ್ಜಿದಾರರಿಗೆ  ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಪಿಎಸ್ ನರಸಿಂಹ ಅವರನ್ನೊಳಗೊಂಡ ನ್ಯಾಯಪೀಠ ಅನುಮತಿ ನೀಡಿದೆ.

ಸರ್ವೇ ಕಮಿಷನರ್ ನೇಮಕಕ್ಕೆ ಸಂಬಂಧ ಅಲಹಾಬಾದ್ ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿಯ ಆಡಳಿತ ಸಮಿತಿಯು ಸಲ್ಲಿಸಿದ ಮೇಲ್ಮನವಿಯ ಬಗ್ಗೆ ಹಿಂದೂ ಅರ್ಜಿದಾರರು ಮೂರು ವಾರಗಳಲ್ಲಿ ತಮ್ಮ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಪೀಠ ನಿರ್ದೇಶಿಸಿತು.

ಸರ್ವೆಯಲ್ಲಿ 'ಶಿವಲಿಂಗ' ಕಂಡುಬಂದಿದೆ ಎಂದು ಹೇಳಲಾದ ಜ್ಞಾನವಾಪಿ-ಶೃಂಗಾರ್ ಗೌರಿ ಸಂಕೀರ್ಣದೊಳಗಿನ ಪ್ರದೇಶದ ರಕ್ಷಣೆಗೆ ಖಾತ್ರಿಗೆ ವಾರಣಾಸಿಯ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ನಿರ್ದೇಶಿಸಿ ಸರ್ವೋಚ್ಛ ನ್ಯಾಯಾಲಯ ಮೇ 17 ರಂದು  ಮಧ್ಯಂತರ ಆದೇಶ ನೀಡಿತ್ತು.

ಸಮಸ್ಯೆಯ ಸಂಕೀರ್ಣತೆ ಮತ್ತು ಸೂಕ್ಷ್ಮತೆ ಯನ್ನು ನೋಡಿ, 25-30 ವರ್ಷಕ್ಕಿಂತ ಹೆಚ್ಚು ಅನುಭವವಿರುವ ಹಿರಿಯ ನ್ಯಾಯಾಂಗ ಅಧಿಕಾರಿ ಪ್ರಕರಣವನ್ನು ನಿಭಾಯಿಸಿದರೆ ಉತ್ತಮ ಎಂದು ಭಾವಿಸಿ ಮೇ 20 ರಂದು ಜ್ಞಾನವಾಪಿ ಮಸೀದಿಯ ಮೇಲೆ ಹಿಂದೂ ಭಕ್ತರು ಸಲ್ಲಿಸಿದ ಸಿವಿಲ್ ಮೊಕದ್ದಮೆಯನ್ನು ಸಿವಿಲ್ ನ್ಯಾಯಾಧೀಶರಿಂದ (ಹಿರಿಯ ವಿಭಾಗ) ವಾರಣಾಸಿಯ ಜಿಲ್ಲಾ ನ್ಯಾಯಾಧೀಶರಿಗೆ  ಸುಪ್ರೀಂ ಕೋರ್ಟ್ ವರ್ಗಾಯಿಸಿತ್ತು.  

ಮೇ 17 ರಂದು ನೀಡಿದ ಮಧ್ಯಂತರ ಆದೇಶದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಹೇಳಲಾದ ಪ್ರದೇಶದ ರಕ್ಷಣೆಗೆ ನಿರ್ದೇಶಿಸಿದ ನ್ಯಾಯಾಲಯ, ಮಸೀದಿ ಆವರಣದಲ್ಲಿ ಮುಸ್ಲಿಮರಿಗೆ ನಮಾಜ್ ಮಾಡಲು ಅವಕಾಶ ನೀಡಿತ್ತು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT