ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: 24 ಗಂಟೆಗಳ ಅವಧಿಯಲ್ಲಿ 833 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 833 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಈವರೆಗೆ ಸೋಂಕು ಪ್ರಕರಣಗಳ ಸಂಖ್ಯೆ  4,46,65,643 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 833 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಈವರೆಗೆ ಸೋಂಕು ಪ್ರಕರಣಗಳ ಸಂಖ್ಯೆ  4,46,65,643 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ ಕೇಳದಲ್ಲಿ ಮೂವರು ಸೇರಿದಂತೆ ಒಟ್ಟು 8 ಮಂದಿ ಸಾವಿಗೀಡಾಗಿದ್ದು, ಈವರೆಗೆ 5,30,528 ಜನರು ಮೃತಪಟ್ಟಿದ್ದಾರೆ. ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 12,553 ಕ್ಕೆ ಇಳಿಕೆಯಾಗಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.03ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.78ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಸದ್ಯ ಈವರೆಗೆ ದೇಶದಲ್ಲಿ 4,41,22,562 ಜನರು ಸೋಂಕಿನಿಂದ ಗುಣಮುಖರಾಗಿದ್ದು, ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ.

ಸಚಿವಾಲಯದ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ 219.79 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘Parivar together’: ಪಿಂಪ್ರಿ-ಚಿಂಚ್‌ವಾಡ್ ಪಾಲಿಕೆ ಚುನಾವಣೆ; ಶರದ್ ಪವಾರ್ ಜೊತೆ ಮೈತ್ರಿ ಘೋಷಿಸಿದ ಅಜಿತ್ ಪವಾರ್!

'ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿದ್ದಾರೆ: ಮುಕ್ಕಾಲು ಪ್ರಪಂಚ ಗೆದ್ದ ಅಲೆಕ್ಸಾಂಡರ್ ಶಾಶ್ವತ ಇರಲಿಲ್ಲ, ಸದ್ದಾಂ ಹುಸೇನ್ ಅವಿತುಕೊಂಡ'

ವೈಕುಂಠ ಏಕಾದಶಿ ಯಾವಾಗ: ವ್ರತ ಮಹಿಮೆ ಏನು; ಏಕಾದಶಿಯಂದೇ ವೈಕುಂಠ ದ್ವಾರ ತೆರೆಯುವುದೇಕೆ?

ರೋಹಿಣಿ ನಕ್ಷತ್ರದವರಿಗೆ ಕೃಷ್ಣನಂತೆ ಅನೇಕ ಪತ್ನಿಯರು ಇರ್ತಾರಾ: ಪುನರ್ವಸು ನಕ್ಷತ್ರದಲ್ಲಿ ಜನಿಸಿದರೆ ರಾಮನಂತೆ ವನವಾಸವೇ?

ಚಿತ್ರದುರ್ಗ ಬಸ್ ದುರಂತ: DNA ವರದಿ ಆಧರಿಸಿ ಕುಟುಂಬಗಳಿಗೆ ಮೃತದೇಹ ಹಸ್ತಾಂತರ

SCROLL FOR NEXT