ಸಚಿವ ಕೆ ಪೊನ್ಮುಡಿ 
ದೇಶ

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ಮೀಸಲಾತಿ ಜಾರಿಗೆ ತರುವುದಿಲ್ಲ: ತಮಿಳುನಾಡು ಸಚಿವ

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ(ಇಡಬ್ಲ್ಯೂಎಸ್‌) ಶಿಕ್ಷಣ ಮತ್ತು ಉದ್ಯೋಗದಲ್ಲಿ  ಶೇ. 10 ರಷ್ಟು ಮೀಸಲಾತಿಯನ್ನು ತಮಿಳುನಾಡಿನಲ್ಲಿ ಜಾರಿಗೆ ತರುವುದಿಲ್ಲ ಎಂದು ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರು ಶನಿವಾರ ಹೇಳಿದ್ದಾರೆ.

ಚೆನ್ನೈ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ(ಇಡಬ್ಲ್ಯೂಎಸ್‌) ಶಿಕ್ಷಣ ಮತ್ತು ಉದ್ಯೋಗದಲ್ಲಿ  ಶೇ. 10 ರಷ್ಟು ಮೀಸಲಾತಿಯನ್ನು ತಮಿಳುನಾಡಿನಲ್ಲಿ ಜಾರಿಗೆ ತರುವುದಿಲ್ಲ ಎಂದು ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರು ಶನಿವಾರ ಹೇಳಿದ್ದಾರೆ.

ಇಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಪಕ್ಷಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೊನ್ಮುಡಿ ಅವರು, ತಮಿಳುನಾಡು ಸರ್ಕಾರ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿಯನ್ನು ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿದರು.

ಸಭೆಯಲ್ಲಿ ಪಕ್ಷಗಳ ಮುಖಂಡರು ಇಡಬ್ಲ್ಯೂಎಸ್‌ಗೆ ಶೇ. 10 ರಷ್ಟು ಮೀಸಲಾತಿಯನ್ನು ತಿರಸ್ಕರಿಸುವ ನಿರ್ಣಯ ಅಂಗೀಕರಿಸಿದರು. ಏಕೆಂದರೆ ಇದು ಸಾಮಾಜಿಕ ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ ಮತ್ತು ಈ ಮೀಸಲಾತಿಯು ಸುಪ್ರೀಂ ಕೋರ್ಟ್‌ನ ಹಿಂದಿನ ವಿವಿಧ ತೀರ್ಪುಗಳಿಗೆ ವಿರುದ್ಧವಾಗಿದೆ. ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠದ ಮುಂದೆ ಮರುಪರಿಶೀಲನಾ ಅರ್ಜಿ ಸಲ್ಲಿಸಬೇಕು ಮತ್ತು ತಮಿಳುನಾಡು ಸರ್ಕಾರವು ತನ್ನ ಬಲವಾದ ವಾದವನ್ನು ಮಂಡಿಸಬೇಕು ಎಂದು ನಿರ್ಣಯ ಒತ್ತಾಯಿಸಿದೆ.

ರಾಷ್ಟ್ರೀಯ ಮಟ್ಟದಲ್ಲಿ ಇಡಬ್ಲ್ಯೂಎಸ್‌ಗೆ ಶೇ. 10 ರಷ್ಟು ಮೀಸಲಾತಿಯನ್ನು ಸ್ವಾಗತಿಸಿದ ಕಾಂಗ್ರೆಸ್ ಮತ್ತು ಸಿಪಿಎಂ ಪ್ರತಿನಿಧಿಗಳು ಡಿಎಂಕೆ ಸರ್ಕಾರ ರಾಜ್ಯದಲ್ಲಿ ತೆಗೆದುಕೊಂಡ ನಿಲುವನ್ನು ಬೆಂಬಲಿಸಿದರು. ಈ ಮೀಸಲಾತಿಯಲ್ಲಿ ಡಿಎಂಕೆ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಪ್ರತಿಪಾದಿಸಿದ ಎಐಎಡಿಎಂಕೆ ಹಾಗೂ ಈ ಮೀಸಲಾತಿಯನ್ನು ಸ್ವಾಗತಿಸಿದ ಬಿಜೆಪಿ ಇಂದಿನ ಸಭೆಯನ್ನು ಬಹಿಷ್ಕರಿಸಿವೆ.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸ್ಟಾಲಿನ್ ಅವರು, ಇಡಬ್ಲ್ಯೂಎಸ್‌ಗೆ ಶೇ. 10 ರಷ್ಟು ಮೀಸಲಾತಿಯನ್ನು ಒಪ್ಪಿಕೊಳ್ಳುವುದರಿಂದ ಸಾಮಾಜಿಕ ನ್ಯಾಯದ ಮೂಲವನ್ನೇ ಅಸ್ಥಿರಗೊಳಿಸಲು ದಾರಿ ಮಾಡಿಕೊಡುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT