ದೇಶ

ಹಿಮಾಚಲ ಪ್ರದೇಶ ಚುನಾವಣೆ: ಚುನಾವಣೋತ್ತರ ಸಮೀಕ್ಷೆಗಳಿಗೆ ಚುನಾವಣಾ ಆಯೋಗ ನಿಷೇಧ

Lingaraj Badiger

ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆ ನಡೆಸುವುದನ್ನು ಮತ್ತು ಯಾವುದೇ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ಪ್ರಕಟಿಸುವುದನ್ನು ಚುನಾವಣಾ ಆಯೋಗ ನಿಷೇಧಿಸಿದೆ.

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮೀಕ್ಷೆಗಳನ್ನು ನಡೆಸುವುದು ಅಥವಾ ಪ್ರಕಟಿಸುವುದನ್ನು ನವೆಂಬರ್ 12 ರಿಂದ ಡಿಸೆಂಬರ್ 5ರವರೆಗೆ ನಿಷೇಧಿಸಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಅಧಿಸೂಚನೆ ಹೊರಡಿಸಿದೆ.

ಹಿಮಾಚಲ ಪ್ರದೇಶದ ಎಲ್ಲಾ 68 ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರ ಒಂದೇ ಹಂತದಲ್ಲಿ ಮತದಾನ ನಡೆದಿರುವ ಹಿನ್ನೆಲೆಯಲ್ಲಿ ಈ ನಿಷೇಧಾಜ್ಞೆ ಹೊರಡಿಸಲಾಗಿದೆ.

12-11-2022 ರಂದು ಬೆಳಗ್ಗೆ 8 ರಿಂದ 05-12-2022 ರಂದು ಸಂಜೆ 5.30 ರವರೆಗೆ ಯಾವುದೇ ಎಕ್ಸಿಟ್ ಪೋಲ್ ನಡೆಸುವ ಮತ್ತು ಯಾವುದೇ ಎಕ್ಸಿಟ್ ಪೋಲ್‌ನ ಫಲಿತಾಂಶವನ್ನು ಪ್ರಕಟಿಸುವಂತಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

SCROLL FOR NEXT