ಈಸುದನ್ ಗಧ್ವಿ 
ದೇಶ

ಗುಜರಾತ್ ಚುನಾವಣೆ: ಖಂಭಾಲಿಯಾದಿಂದ ಎಎಪಿ ಸಿಎಂ ಅಭ್ಯರ್ಥಿ ಸ್ಪರ್ಧೆ

ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಈಸುದನ್ ಗಧ್ವಿ ಅವರು ತಮ್ಮ ತವರು ಜಿಲ್ಲೆ ದೇವಭೂಮಿ ದ್ವಾರಕಾದ ಖಂಭಾಲಿಯಾ ಕ್ಷೇತ್ರದಿಂದ...

ಅಹಮದಾಬಾದ್: ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಈಸುದನ್ ಗಧ್ವಿ ಅವರು ತಮ್ಮ ತವರು ಜಿಲ್ಲೆ ದೇವಭೂಮಿ ದ್ವಾರಕಾದ ಖಂಭಾಲಿಯಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮೂಲಕ ಈ ಘೋಷಣೆ ಮಾಡಿದ್ದಾರೆ.

'ರೈತರು, ನಿರುದ್ಯೋಗಿ ಯುವಕರು, ಮಹಿಳೆಯರು, ಉದ್ಯಮಿಗಳ ಪರ ಹಲವು ವರ್ಷಗಳಿಂದ ಧ್ವನಿ ಎತ್ತಿದ ಈಸುದನ್ ಗಧ್ವಿ ಅವರು ಖಂಭಾಲಿಯಾದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ! ಶ್ರೀಕೃಷ್ಣನ ಪುಣ್ಯಭೂಮಿಯಿಂದ ಗುಜರಾತ್‌ಗೆ ಹೊಸ ಮತ್ತು ಉತ್ತಮ ಮುಖ್ಯಮಂತ್ರಿ ಸಿಗುತ್ತಾರೆ' ಎಂದು ದೆಹಲಿ ಮುಖ್ಯಮಂತ್ರಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಗಧ್ವಿ, 'ನೀವು ಮತ್ತು ಗುಜರಾತ್‌ನ ಜನ ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ನನ್ನ ಕೊನೆಯ ಉಸಿರು ಇರುವವರೆಗೂ ಉಳಿಸಿಕೊಳ್ಳುತ್ತೇನೆ ಮತ್ತು ಗುಜರಾತ್‌ನ ಜನರ ಸೇವೆ ಮಾಡುತ್ತೇನೆ ಎಂದು ಭರವಸೆ ನೀಡುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!