ದೇಶ

ಗುಜರಾತ್ ಚುನಾವಣೆ: ಹಳೆ ಪಿಂಚಣಿ ಯೋಜನೆ ಮರುಜಾರಿಗೊಳಿಸುವುದಾಗಿ ಕಾಂಗ್ರೆಸ್, ಎಎಪಿ ಭರವಸೆ

Lingaraj Badiger

ಅಹಮದಾಬಾದ್: ಹಳೆಯ ಪಿಂಚಣಿ ಯೋಜನೆಯನ್ನು(ಒಪಿಎಸ್) ಮರು ಜಾರಿಗೊಳಿಸಬೇಕು ಎಂಬ ಸರ್ಕಾರಿ ನೌಕರರ ಬೇಡಿಕೆಯು ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖ ವಿಷಯವಾಗಿ ಹೊರಹೊಮ್ಮಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಅದನ್ನು ಜಾರಿಗೆ ತರುವುದಾಗಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಭರವಸೆ ನೀಡಿವೆ.

ಈ ಭರವಸೆಯೊಂದಿಗೆ, ಹೊಸ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಸರ್ಕಾರದ ವಿರುದ್ಧ ಬಂಡೆದ್ದಿರುವ ಲಕ್ಷಾಂತರ ಸರ್ಕಾರಿ ನೌಕರರ ಬೆಂಬಲ ಪಡೆಯುವ ಗುರಿಯನ್ನು ವಿರೋಧ ಪಕ್ಷಗಳು ಹೊಂದಿವೆ.

ಗುಜರಾತ್ ಸರ್ಕಾರವು ಏಪ್ರಿಲ್ 1, 2005 ರಂದು ಅಥವಾ ನಂತರ ಸೇವೆಗೆ ಸೇರುವ ಉದ್ಯೋಗಿಗಳಿಗೆ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿದೆ.

182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

SCROLL FOR NEXT